ರಿಪ್ಪನ್​​ ಪೇಟೆ : ಬೆಳಗಿನ ಜಾವವೇ ತಹಶೀಲ್ದಾರ್ ದಾಳಿ: ರಿಪ್ಪನ್‌ಪೇಟೆಯಲ್ಲಿ ಅಕ್ರಮ ಜಂಬಿಟ್ಟಿಗೆ ಸಾಗಿಸುತ್ತಿದ್ದ 2 ಲಾರಿಗಳು ಜಪ್ತಿ!

ಹಂಚಿಕೊಳ್ಳಿ
WhatsApp Facebook X Telegram
ರಿಪ್ಪನ್_ಪೇಟೆಯಲ್ಲಿ ಅಕ್ರಮ ಜಂಬಿಟ್ಟಿಗೆ ಸಾಗಿಸುತ್ತಿದ್ದ 2 ಲಾರಿಗಳು ಜಪ್ತಿ
ರಿಪ್ಪನ್_ಪೇಟೆಯಲ್ಲಿ ಅಕ್ರಮ ಜಂಬಿಟ್ಟಿಗೆ ಸಾಗಿಸುತ್ತಿದ್ದ 2 ಲಾರಿಗಳು ಜಪ್ತಿ

ರಿಪ್ಪನ್​​ ಪೇಟೆ : ಆನಂದಪುರ ಮಾರ್ಗವಾಗಿ ಅಕ್ರಮವಾಗಿ ಜಂಬಿಟ್ಟಿಗೆ ರವಾನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಹೊಸನಗರ ತಾಲೂಕಿನ ತಹಶೀಲ್ದಾರ್ ಭರತ್ ರಾಜ್ ನೇತೃತ್ವದ ಅಧಿಕಾರಿಗಳ ತಂಡವು ಗುರುವಾರ ಮುಂಜಾನೆ 5:30 ರ ಸುಮಾರಿಗೆ ದಿಢೀರ್ ದಾಳಿ ನಡೆಸಿದೆ. 

ರಿಪ್ಪನ್‌ಪೇಟೆ ಸಮೀಪದ ವೊಡಹೊಸಳ್ಳಿ ರಸ್ತೆಯ ಬಳಿ ನಿಗಾವಹಿಸಿದ್ದ ಅಧಿಕಾರಿಗಳ ತಂಡ, ಆನಂದಪುರ ಕಡೆಯಿಂದ ಆಗಮಿಸುತ್ತಿದ್ದ ಎರಡು ಲಾರಿಗಳನ್ನು ತಡೆದು ಪರಿಶೀಲಿಸಿತು. ಈ ಸಂದರ್ಭದಲ್ಲಿ ಯಾವುದೇ ದಾಖಲೆಗಳಿಲ್ಲದೆ ನಿಯಮಬಾಹಿರವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದುದು ದೃಢಪಟ್ಟ ಹಿನ್ನೆಲೆಯಲ್ಲಿ, ತಕ್ಷಣವೇ ಎರಡೂ ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದರು. 

ವಶಪಡಿಸಿಕೊಂಡ ಲಾರಿಗಳನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಭರತ್ ರಾಜ್ ಅವರೊಂದಿಗೆ ಕಂದಾಯ ಸಿಬ್ಬಂದಿಗಳಾದ ಗಣೇಶ್ ಹಾಗೂ ಶಿವಪ್ಪ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor