ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಾಳೆ ಮತ್ತು ನಾಡಿದ್ದು ಎರಡು ದಿನ ಶಿವಮೊಗ್ಗದ ಹಲವು ಕಡೆಗಳಲ್ಲಿ ಕರೆಂಟ್ ಇರಲ್ಲ! ಈ ಸಂಬಂಧ ಮೆಸ್ಕಾಂ ಶಿವಮೊಗ್ಗ ವಿವಿಧ ಹಂತಗಳಲ್ಲಿ ಪ್ರಕಟಣೆಯನ್ನ ನೀಡಿದ್ದು, ಅದರ ವಿವರ ಹೀಗಿದೆ.
ಎಂ.ಆರ್.ಎಸ್. ತ್ರೈಮಾಸಿಕ ನಿರ್ವಹಣೆ: ಅ.3ರಂದು ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆ.ವಿ. ಡಿವಿಜಿ–1 ಬೇನಲ್ಲಿ ಅಕ್ಟೋಬರ್ 3ರಂದು ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಅಂದು ಬೆಳಗ್ಗೆ 9ರಿಂದ ಸಂಜೆ 3ರವರೆಗೆ ಹೊಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರ, ಹೊಳಲೂರು ವಿದ್ಯುತ್ ವಿತರಣಾ ಕೇಂದ್ರ ಹಾಗೂ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಇದರೊಂದಿಗೆ ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ವಿದ್ಯುತ್ ವ್ಯತ್ಯಯವಾಗಲಿದೆ.
ತ್ಯಾವರೆಚಟ್ನಹಳ್ಳಿ ಕೇಂದ್ರ ವ್ಯಾಪ್ತಿಯಲ್ಲಿ ಅ.3ರಂದು ದಿನವಿಡೀ ವಿದ್ಯುತ್ ವ್ಯತ್ಯಯ
66/11 ಕೆ.ವಿ. ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 3ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ಕೇಂದ್ರದಿಂದ ವಿದ್ಯುತ್ ಪಡೆಯುವ ವಿವಿಧ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಕುವೆಂಪು ನಗರ, ಎನ್‌ಇಎಸ್ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಸೂಡಾ ಬಡಾವಣೆ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಆಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎಯಿಂದ ಎಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 1ನೇ ಹಂತದ ಬಡಾವಣೆ, ಹೊನ್ನಾಳಿ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಶಾಂತಿನಗರ ಹಾಗೂ ಪೆಬೆಲ್ಸ್ ಅಪಾರ್ಟ್‌ಮೆಂಟ್ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.
ರಾಗಿಗುಡ್ಡ, ವಡ್ಡರಹಟ್ಟಿ, ದೇವಂಗಿ ತೋಟ, ವಿಜಯಲಕ್ಷ್ಮಿ ರೈಸ್ ಮಿಲ್, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್, ಸವಳಂಗ ರಸ್ತೆ, ತ್ಯಾವರೆಚಟ್ನಹಳ್ಳಿ, ಯುಜಿಡಿ, ಶೇಷಾದ್ರಿಪುರಂ, ಲಕ್ಷ್ಮೀ ವೆಂಕಟೇಶ್ವರ ಸಾ ಮಿಲ್, ತ್ರಿಮೂರ್ತಿ ನಗರ, ನವುಲೆ, ಆಶ್ವತ್ ನಗರ, ಎಲ್‌ಬಿಎಸ್ ನಗರ, ಕೀರ್ತಿ ನಗರ, ಬಸವೇಶ್ವರ ನಗರ, ಕೃಷಿ ನಗರ, ತರಳಬಾಳು ಬಡಾವಣೆ ಹಾಗೂ ಸೇವಾಲಾಲ್ ನಗರದಲ್ಲೂ ವಿದ್ಯುತ್ ವ್ಯತ್ಯಯವಾಗಲಿದೆ.ಡಾಲರ್ಸ್ ಕಾಲೋನಿ, ಪವನಶ್ರೀ ಬಡಾವಣೆ, ಮಲ್ಲೇಶ್ವರ ನಗರ, ಶಂಕರ ಮಠ ರಸ್ತೆ–ಶೋರೂಮ್ ರಸ್ತೆ, ಜಯದೇವ ರೈಸ್ ಮಿಲ್, ಶಂಕರ ಕಾಲೋನಿ, ಮಲ್ಲಿಕಾರ್ಜುನ ನಗರ, ಶೇಷಾದ್ರಿಪುರಂ, ಶಂಕರಮಠದ ಹಿಂಭಾಗದ ರಸ್ತೆ, ರಾಮಾರಾವ್ ಲೇಔಟ್, ನ್ಯಾಷನಲ್ ಪಬ್ಲಿಕ್ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಜಯನಗರ–ಬಸವನಗುಡಿ ಭಾಗದಲ್ಲಿ ಅ.3ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರ ಉಪವಿಭಾಗ–1ರ ಘಟಕ–2 ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ನಡೆಯಲಿರುವುದರಿಂದ ಅಕ್ಟೋಬರ್ 3ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.ಜಯನಗರ, ಬಸವನಗುಡಿ, ಮಲ್ನಾಡ್ ಇಎನ್‌ಟಿ ಆಸ್ಪತ್ರೆ, ಸರ್ವೋದಯ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಶಿವಮೊಗ್ಗ ನಗರ ಉಪವಿಭಾಗದಲ್ಲಿ ಅ.4ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರ ಉಪವಿಭಾಗ–1ರ ಘಟಕ–1 ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿ ನಡೆಯಲಿರುವುದರಿಂದ ಅಕ್ಟೋಬರ್ 4ರಂದು ಮಧ್ಯಾಹ್ನ 1ರಿಂದ ಸಂಜೆ 6ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.ಚಿಕ್ಕಲ್, ಗುರುಪುರ, ಪುರಲೆ, ವೆಂಕಟೇಶ ನಗರ–ಹಸೂಡಿ ರಸ್ತೆ, ಶಾಂತಮ್ಮ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
