ಮಲೆನಾಡು ಟುಡೆ ಸುದ್ದಿ / ರಿಪ್ಪನ್ಪೇಟೆ / ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆ ಗ್ರಾಮದಲ್ಲಿ ಚಿರತೆಯ ದಾಳಿಗೆ 2 ವರ್ಷದ ಕರುವೊಂದು ಮೃತಪಟ್ಟ ಬಗ್ಗೆ ವರದಿಯಾಗಿದೆ . ಹೊಸನಗರ ತಾಲ್ಲೂಕು ಹಿಂಡ್ಲೆಮನೆಯ ಶ್ರೀಮತಿ ಎಂಬವರಿಗೆ ಸೇರಿದ ಕರುವಿನ ಮೇಲೆ ದಾಳಿ ಮಾಡಿದೆ.
ಕಳೆದ ಶನಿವಾರ ಮೇಯಲು ಬಿಟ್ಟಿದ್ದ ವೇಳೆ ಚಿರತೆ ದಾಳಿ ನಡೆಸಿರಬಹುದು. ಕರುವಿನ ಗಂಟಲಿನ ಭಾಗಕ್ಕೆ ಬಾಯಿ ಹಾಕಿರುವ ಚಿರತೆ ಅದನ್ನ ಗಾಯಗೊಳಿಸಿದೆ. ಚಿರತೆ ದಾಳಿಯಿಂದ ತಪ್ಪಿಸಿಕೊಂಡ ಕರು ಹೇಗೋ ಮನೆ ಕಡೆಗೆ ಮರಳಿತ್ತು. ಆದರೆ ಗಂಟಲಿನ ಭಾಗಕ್ಕೆ ಗಾಯವಾಗಿದ್ದರಿಂದ ಕೆಲವೇ ಸಮಯದಲ್ಲಿ ಮೃತಪಟ್ಟಿದೆ.
ಕಳೆದ ಕೆಲವು ದಿನಗಳಿಂದ ಹಿಂಡ್ಲೆಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಇದೀಗ ಕರವನ್ನ ಗಾಯಗೊಳಿಸಿರುವುದು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಜನರು ಹಾಗೂ ಜಾನುವಾರುಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಚಲನವಲನದ ಬಗ್ಗೆ ಪರಿಶೀಲನೆ ನಡೆಸಬೇಕು. ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರಲ್ಲಿ ಉಂಟಾಗಿರುವ ಭಯವನ್ನು ದೂರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
