ಉಡುಪಿ ಪೊಲೀಸರ ಕಾರ್ಯಾಚರಣೆ, 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗದ ವಾರೆಂಟ್ ಆರೋಪಿ ಮಂಡ್ಯದಲ್ಲಿ ಅರೆಸ್ಟ್

ಹಂಚಿಕೊಳ್ಳಿ
WhatsApp Facebook X Telegram
digital Ban Bike Owner Jailed & Fined for Minor's Accident in Tumakuru | Karnataka Court Verdict
Bike Owner Jailed & Fined for Minor's Accident in Tumakuru | Karnataka Court Verdict

ಮಲೆನಾಡು ಟುಡೆ ಸುದ್ದಿ / ಉಡುಪಿ / ಕಳೆದ 9 ವರ್ಷಗಳಿಂದ ಉಡುಪಿ ಕೋರ್ಟ್​ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಶಿವಮೊಗ್ಗ ಮೂಲದ ಎಚ್. ವೆಂಕಟೇಶ್ ಬಂಧಿತ ಆರೋಪಿ.

ಈತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2009ರಲ್ಲಿ ಜಾಮೀನು ಪಡೆದು ಹೊರಬಂದಿದ್ದ. ಆನಂತರ ಮತ್ತೆ ಕೋರ್ಟ್​ಗೆ ಅಟೆಂಡ್ ಆಗಿಲ್ಲ. ತಲೆಮರೆಸಿಕೊಂಡಿದ್ದ ಈತನಿಗಾಗಿ ವಾರಂಟ್ ಹೊರಡಿಸಲಾಗಿತ್ತು.

ಹೀಗಾಗಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿಯನ್ನು ಪಾಂಡವಪುರದಲ್ಲಿ ಪತ್ತೆ ಮಾಡಿದ್ದಾರೆ. ಬಳಿಕ ಆತನನ್ನು ವಶಕ್ಕೆ ಪಡೆದು ಕಾರ್ಕಳದ ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗೆ ಆ.17ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor