ಶಿವಮೊಗ್ಗ ಆಶ್ರಯ ಮನೆಗಳ ವಿಚಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ !

ಹಂಚಿಕೊಳ್ಳಿ
WhatsApp Facebook X Telegram
Ks eshwarappa 
Ks eshwarappa 

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಆಶ್ರಯ ಯೋಜನೆಯ ಮನೆಗಳ ನಿರ್ಮಾಣ ಬೇಗ ಮುಗಿಸದಿದ್ದರೇ ಹೋರಾಟ ಮಾಡ್ಬೇಕಾಗುತ್ತೆ ಅಂತಾ ರಾಷ್ಟ್ರಭಕ್ತರ ಬಳಗದ ಪ್ರಮುಖ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ.

ನಿನ್ನೆ ದಿನ ಇದೇ ವಿಚಾರಕ್ಕೆ ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣಗೌಡರನ್ನು ಭೇಟಿ ಮಾಡಿ ಮಾತನಾಡಿದಕೆ.ಎಸ್.ಈಶ್ವರಪ್ಪ, ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಷನ್ ವತಿಯಿಂದ ಗೋಪಿಶೆಟ್ಟಿಕೊಪ್ಪದಲ್ಲಿ 1,296 ಮನೆಗಳ ನಿರ್ಮಾಣಕ್ಕೆ 2018ರಲ್ಲಿ ಚಾಲನೆ ನೀಡಲಾಗಿತ್ತು. ಆದರೆ ಇದುವರೆಗೂ ಒಂದೇ ಒಂದು ಮನೆ ಪೂರ್ಣಗೊಂಡಿಲ್ಲ ಹಾಗೂ ಫಲಾನುಭವಿಗಳಿಗೆ ಹಸ್ತಾಂತರವಾಗಿಲ್ಲ ಅಂತಾ ದೂರಿದ್ರು.

836 ಫಲಾನುಭವಿಗಳಿಂದ ತಲಾ ₹8 ಸಾವಿರ ಹಾಗೂ 300 ಫಲಾನುಭವಿಗಳಿಂದ ತಲಾ ₹80 ಸಾವಿರ ಸಂಗ್ರಹಿಸಿ 8 ವರ್ಷಗಳು ಕಳೆದಿವೆ. ಗುತ್ತಿಗೆದಾರನಿಗೆ ಈಗಾಗಲೇ ₹11 ಕೋಟಿ ಪಾವತಿಯಾಗಿದ್ದು, ಆತ ಸ್ಥಳದಲ್ಲಿದ್ದ ಕಾರ್ಮಿಕರು ಮತ್ತು ಯಂತ್ರಗಳನ್ನು ತೆಗೆದುಕೊಂಡು ಹೋಗಿದ್ದಾನೆ. ಈ ಪರಿಸ್ಥಿತಿಯಲ್ಲೂ ಸರ್ಕಾರ ಮತ್ತು ನಿಗಮ ಯಾಕೆ ಸುಮ್ಮನಿದೆ ಎಂದು ಪ್ರಶ್ನಿಸಿದ್ದಾರೆ.

ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕೆ.ಎಸ್.ಈಶ್ವರಪ್ಪ

ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಈಶ್ವರಪ್ಪ, ಕೇಂದ್ರದಿಂದ ಬಂದ ಹಣವನ್ನ ಬೇರೆ ಉದ್ದೇಶಕ್ಕೆ ಬಳಸಲಾಗಿದೆ ಮತ್ತು ಇದರಿಂದ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿದರು. ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಇಲ್ಲವಾದರೆ ಫಲಾನುಭವಿಗಳೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇನ್ನೂ ಈ ವಿಚಾರದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣಗೌಡ ಮಾತನಾಡಿ, ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಪಡೆಯಲು ಇ-ಸ್ವತ್ತು ಕಡ್ಡಾಯವಾಗಿರುವುದರಿಂದ ಪಾಲಿಕೆಯಿಂದ 605 ಮನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನೀಡಲಾಗಿದೆ. ಗ್ರಾಮ ಪಂಚಾಯಿತಿಯಿಂದ ಕೇವಲ 150 ಇ-ಸ್ವತ್ತು ಮಾಡಲಾಗಿದೆ ಎಂದು ತಿಳಿಸಿದರು. ಯೋಜನೆ ಪ್ರದೇಶದಲ್ಲಿ ಶಾಶ್ವತ ವಿದ್ಯುತ್, ನೀರು ಮತ್ತು ಯುಜಿಡಿ ವ್ಯವಸ್ಥೆ ಪೂರ್ಣಗೊಳಿಸಲು ₹15 ಕೋಟಿ ಅಗತ್ಯವಿದ್ದು, ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದೆ. ಪಾಲಿಕೆ ವತಿಯಿಂದ ₹5 ಕೋಟಿ ತಕ್ಷಣ ನೀಡಲು ಸಿದ್ಧವಿದೆ ಎಂದರು

ಉಳಿದಂತೆ ಈ ಕುರಿತು ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೂ ಈಶ್ವರಪ್ಪ ಮಾತನಾಡಿದರು. ಅಕ್ಟೋಬರ್ 27ರೊಳಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಉನ್ನತ ಮಟ್ಟದ ಅಧಿಕಾರಿಗಳು ಸಭೆ ನಡೆಸಿ ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಮನೆ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಕೆ.ಈ. ಕಾಂತೇಶ್, ಪಾಲಿಕೆ ಮಾಜಿ ಮೇಯರ್ ಸುವರ್ಣ ಶಂಕರ್, ಮಾಜಿ ಉಪ ಮೇಯರ್ ಲಕ್ಷ್ಮೀ ಶಂಕರ ನಾಯ್, ಪಾಲಿಕೆ ಮಾಜಿ ಸದಸ್ಯರಾದ ಈ.ವಿಶ್ವಾಸ್, ಅನಿತಾ, ಸೀತಾಲಕ್ಷ್ಮಿ ಶಿವಾಜ, ರಾಜು, ಕೆಂಪಮ್ಮ, ಶಂಕರ್, ಮಣಿ, ಪ್ರದೀಪ್ ಕವಾಡ್, ಕುಬೇರಪ್ಪ, ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor