ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ; ಪತಿ, ಅತ್ತೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ 

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೇ ಸುದ್ದಿ / ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿಗಳಾದ ಪತಿ ಮತ್ತು ಅತ್ತೆಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ತೀರ್ಪು ನೀಡಿದೆ. 

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಜ್ಯೋತಿ (24) ಮೃತಪಟ್ಟ ಮಹಿಳೆ. ಆಕೆಗೆ ಪತಿ ದಯಾನಂದ್ (37) ಮತ್ತು ಅತ್ತೆ ಸುಮಿತ್ರಾ (65) ಹೆಚ್ಚುವರಿ ವರದಕ್ಷಿಣೆ ತರುವಂತೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಜ್ಯೋತಿ ಅವರು 2021 ರಂದು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಭಾರತ್ ಜೋಡೋ ಯಾತ್ರೆ 2.0

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಆಗಿನ ಡಿವೈಎಸ್ಪಿ ಶಾಂತವೀರ್ ಇ. ಅವರು ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರಿ ಅಭಿಯೋಜಕರಾದಮಮತಾ ಬಿ.ಎಸ್. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. 

ಪ್ರಕರಣದ ಸಮಗ್ರ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾ ಯಶವಂತ ಕುಮಾರ್ ತೀರ್ಪು ನೀಡಿದ್ದಾರೆ. ಅಪರಾಧಿಗಳಾದ ಪತಿ ದಯಾನಂದ್ ಮತ್ತು ಅತ್ತೆ ಸುಮಿತ್ರಾಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ, 2,24,000 ರೂಪಾಯಿ ದಂಡ ಹಾಗೂ ಮೃತರ ಕುಟುಂಬಕ್ಕೆ 2,00,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor