ಭದ್ರಾವತಿ : ಗಾಂಧಿ ಪಾರ್ಕ್​​​ನಲ್ಲಿ ಈ ರೀತಿ ಮಾಡಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳ ವಿರುದ್ದ ಪೊಲೀಸರಿಗೆ ದೂರು?

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಭದ್ರಾವತಿ: ಸಾರ್ವಜನಿಕರಿಗೆ ತೊಂದರೆ ಉಂಟಾದಾಗ ಮೊದಲಿಗೆ ನೆನಪಿಗೆ ಬರುವುದೇ 112 ಸಿಬ್ಬಂದಿ. ಯಾವುದೇ ಸ್ಥಳವಿರಬಹುದು, ಯಾವುದೇ ಪ್ರಕರಣವಿರಬಹುದು, ಕ್ಷಣಮಾತ್ರದಲ್ಲಿ ಸ್ಥಳಕ್ಕೆ ತೆರಳಿ ಸೂಕ್ತ ಪರಿಹಾರ ನೀಡುತ್ತಾರೆ. ಅದರಂತೆ ಭದ್ರಾವತಿಯ ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ನಡೆದುಕೊಳ್ಳುತ್ತಿದ್ದ ಇಬ್ಬರು ಯುವಕರಿಗೆ 112 ಪೊಲೀಸರು ಬುದ್ಧಿ ಹೇಳಿದ್ದಾರೆ. 

ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿ ಪಾರ್ಕ್‌ನಲ್ಲಿ ಕೆಲ ಕಾಲೇಜು ಯುವಕರು ಮೊಬೈಲ್‌ನಲ್ಲಿ ಗಟ್ಟಿಯಾಗಿ ಹಾಡುಗಳನ್ನು ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಈ ಕುರಿತಾಗಿ 112 ಪೊಲೀಸರಿಗೆ ಫೋನ್ ಮಾಡಿ ದೂರು ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಇಆರ್‌ವಿ ಸಿಬ್ಬಂದಿ ಸ್ಥಳಕ್ಕೆ ದಾವಿಸಿ, ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಉಂಟುಮಾಡದಂತೆ ಹುಡುಗರಿಗೆ ಸೂಕ್ತ ಎಚ್ಚರಿಕೆ ಹಾಗೂ ತಿಳುವಳಿಕೆ ನೀಡಿದ್ದಾರೆ. ಬಳಿಕ ಅವರನ್ನು ಸ್ಥಳದಿಂದ ಕಳುಹಿಸಿದ್ದಾರೆ. 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor