ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಉದ್ಯೋಗ ನಿರೀಕ್ಷೆಯಲ್ಲಿರುವ ಯುವಕ, ಯುವತಿಯರಿಗೆ ಅಕ್ಟೋಬರ್ 13ರಂದು ನೇರ ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಡೆಯಲಿರುವ ಈ ಮೇಳದಲ್ಲಿ ಖಾಸಗಿ ಕಂಪನಿಯು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿದ್ದು, 18ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ. ಈ ಕುರಿತಾಗಿ ವಾರ್ತಾ ಇಲಾಖೆಯ ಮೂಲಕ ನೀಡಲಾಗಿರುವ ಪ್ರಕಟಣೆಯ ವಿವರ ಹೀಗಿದೆ.
ಉಚಿತ ಉದ್ಯೋಗ ಮೇಳದ ಪ್ರಮುಖ ಅಂಶಗಳು
- ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಕ್ಟೋಬರ್ 13ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ರೈನ್‌ಲ್ಯಾಂಡ್ ಆಟೋಕಾರ್ಪ್ ಪ್ರೈ.ಲಿ. ಕಂಪನಿಯು ಮೇಳದಲ್ಲಿ ಭಾಗವಹಿಸಲಿದ್ದು, ಉದ್ಯೋಗಕ್ಕಾಗಿ ಆಗಮಿಸುವ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಿದೆ.
- ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳ ವಯಸ್ಸು 18ರಿಂದ 35 ವರ್ಷದೊಳಗಿರಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.
- ಉದ್ಯೋಗ ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಮೇಳದಲ್ಲಿ ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.
- ಅಕ್ಟೋಬರ್ 13ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ನಗರದ ಸಾಗರ ರಸ್ತೆಯ ಪಂಪಾ ನಗರ 2ನೇ ಕ್ರಾಸ್‌ನ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
- ಉದ್ಯೋಗ ಮೇಳದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು. ಇಲ್ಲವೇ 9380663606 ಅಥವಾ 9108235132 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
