ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ ಕರ್ನಾಟಕದಡಿ 2026-27ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ 7 ಬಿ.ಆರ್.ಸಿ. ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರಂತೆ ಮಾನಸಿಕ ಆರೋಗ್ಯ ಸಲಹೆಗಾರ/ಸಮಾಲೋಚಕರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಲಿಂಗ್ ಮನೋವಿಜ್ಞಾನ ಹಾಗೂ ಸಂಬಂಧಿತ ವಿಷಯಗಳಲ್ಲಿ ಎಂ.ಎ/ಎಂ.ಎಸ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ಗೌರವಧನ ರೂ. 40000/- ಹಾಗೂ ಪ್ರಯಾಣ ಭತ್ಯೆ ರೂ. 10000/-ಗಳನ್ನು ನೀಡಲಾಗುವುದು. ನೇಮಕಾತಿ ಅವಧಿಯು ನೇಮಕಾತಿ ದಿನಾಂಕದಿಂದ ಫೆಬ್ರವರಿ 2027ರ ವರೆಗೆ ಇರುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಅ. 16 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9480695460/ 9480695461 ಗಳನ್ನು ಹಾಗೂ ಇ-ಮೇಲ್ [email protected] ನ್ನು ಸಂಪರ್ಕಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
