ಶಿವಮೊಗ್ಗ : ಯುವ ಕಾಂಗ್ರೆಸ್​​ನಿಂದ ಕೇಂದ್ರ ಸಚಿವ ಸೋಮಣ್ಣ ಕಾರಿಗೆ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ, ಕಾರಣವೇನು ?

ಹಂಚಿಕೊಳ್ಳಿ
WhatsApp Facebook X Telegram
ವಿ ಸೋಮಣ್ಣ ಕಾರಿಗೆ ಮುತ್ತಿಗೆ
ವಿ ಸೋಮಣ್ಣ ಕಾರಿಗೆ ಮುತ್ತಿಗೆ
dasara add shivamogga palike

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಶಿವಮೊಗ್ಗಕ್ಕೂ ವ್ಯಾಪಿಸಿದ್ದು, ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಸೋಮಣ್ಣ ಅವರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಸ್ ನಿಲ್ದಾಣ ಸಮೀಪದ ಅಶೋಕ್ ಸರ್ಕಲ್‌ನಲ್ಲಿ ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ವಾಹನವನ್ನು ತಡೆದು ಘೋಷಣೆಗಳನ್ನು ಕೂಗಿದರು. ಈ ವೇಳೆ ಸಚಿವರ ವಾಹನಗಳನ್ನು ಮುಂದೆ ಕಳುಹಿಸಲು ಪೊಲೀಸರು ಹರಸಾಹಸಪಡಬೇಕಾಯಿತು.

ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಸೋಮಣ್ಣ ಅವರ ವಾಹನ ಅಶೋಕ್ ಸರ್ಕಲ್ ಸಮೀಪಿಸುತ್ತಿದ್ದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು. ಸಚಿವರ ಕಾರಿನತ್ತ ಧಾವಿಸಿದ ಕಾರ್ಯಕರ್ತರು ವಾಹನಕ್ಕೆ ಮುತ್ತಿಗೆ ಹಾಕಿ, ಕಪ್ಪು ಬಾವುಟ ಹಾಗೂ ಕಪ್ಪು ಪಟ್ಟಿ ಪ್ರದರ್ಶಿಸುವ ಮೂಲಕ ಎಸ್‌ಐಆರ್ ವಿರುದ್ಧ ತಮ್ಮ ವಿರೋಧ ದಾಖಲಿಸಿದರು.

ಕೇಂದ್ರ ಸಚಿವರ ಕಾರಿಗೆ ಮುತ್ತಿಗೆ

ಎಸ್‌ಐಆರ್ ವಿರೋಧಿಸಿ ಘೋಷಣೆಗಳನ್ನು ಕೂಗುತ್ತಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ವಾಹನದ ಮುಂದೆ ಜಮಾಯಿಸಿದರು. ಪರಿಣಾಮ ಸಚಿವರ ವಾಹನಗಳು ಮುಂದಕ್ಕೆ ಸಾಗಲು ಅಡ್ಡಿಯಾಯಿತು. ಪ್ರತಿಭಟನಾಕಾರರನ್ನು ನಿಯಂತ್ರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವುದು ಪೊಲೀಸರಿಗೆ ಸವಾಲಾಯಿತು.

dasara add shivamogga palike

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರ್ಶಿತ್, ನಗರಾಧ್ಯಕ್ಷ ಚರರ್ಣ, ತಾಲೂಕು ಅಧ್ಯಕ್ಷ ಪ್ರವೀಣ್, ಆಕಾಶ್, ನಿಖಿಲ್ ವಿಷ್ನು ಸೇರಿದಂತೆ ಹಲವು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾಕಾರರನ್ನು ಎಳೆದೊಯ್ದ ಪೊಲೀಸರು

ಕೇಂದ್ರ ಸಚಿವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಸ್ಥಳದಿಂದ ತೆರವುಗೊಳಿಸಲು ಪೊಲೀಸರು ಮುಂದಾದರು. ಸಚಿವರ ವಾಹನಗಳನ್ನು ಮುಂದೆ ಸಾಗಿಸಲು ಪ್ರಯತ್ನಿಸಿದರೂ ಪ್ರತಿಭಟನಾಕಾರರು ರಸ್ತೆಯಲ್ಲಿಯೇ ಜಮಾಯಿಸಿದ್ದರಿಂದ ಕೆಲಕಾಲ ಅಡಚಣೆ ಉಂಟಾಯಿತು.

dasara add shivamogga palike
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor