ಸುಳ್ಳು ಸುದ್ದಿ ತಡೆಗೆ ಕೋರ್ಟ್ ಮೆಟ್ಟಿಲೇರಿದ ಸಿದ್ದರಾಮಯ್ಯ! ಮಾಧ್ಯಮ, ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಕೋರಿ ಅರ್ಜಿ

ಹಂಚಿಕೊಳ್ಳಿ
WhatsApp Facebook X Telegram
ಮುಖ್ಯಮಂತ್ರಿ ಸಿದ್ದರಾಮಯ್ಯ SIT investigation cm siddaramaih
SIT investigation cm siddaramaih

ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ತಮ್ಮ ವಿರುದ್ಧ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ, ಅವಹೇಳನಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಸುಳ್ಳು ಸುದ್ದಿಗಳ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಇಂದು ಮಂಗಳವಾರ ಮಧ್ಯಂತರ ಆದೇಶ ಹೊರಬೀಳಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಲಾಗುತ್ತಿದೆ. ಇಂತಹ ಸುದ್ದಿಗಳ ಪ್ರಸಾರವನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಲ್ಲಿ ತಡೆಯಾಜ್ಞೆ ಪಡೆಯಲು ಮುಂದಾಗಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳ ಪ್ರಚಾರ ನಡೆಯುತ್ತಿರುವ ಕಾರಣ ನ್ಯಾಯಾಲಯದ ಮೊರೆ ಹೋಗಿರುವುದಾಗಿ ಸ್ಪಷ್ಟಪಡಿಸಿದರು.

ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಕೋರಿ ಅರ್ಜಿ

ತಮ್ಮ ವಿರುದ್ಧ ಮಾನಹಾನಿ ಉಂಟುಮಾಡುವ, ಅವಹೇಳನಕಾರಿ ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಹೇರಬೇಕೆಂದು ಸಿದ್ದರಾಮಯ್ಯ ನ್ಯಾಯಾಲಯವನ್ನು ಕೋರಿದ್ದಾರೆ.

ಈ ಸಂಬಂಧ ಬೆಂಗಳೂರು ನಗರದ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಸೋಮವಾರ ನಗರದ 18ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಅರ್ಜಿಯ ವಿಚಾರಣೆ ನಡೆಸಿದೆ.

ಫೇಸ್‌ಬುಕ್, ಯೂಟ್ಯೂಬ್, ವಾಟ್ಸ್‌ಆ್ಯಪ್ ಸುದ್ದಿಗಳಿಗೂ ತಡೆ ಕೋರಿಕೆ

ಫೇಸ್‌ಬುಕ್, ಯೂಟ್ಯೂಬ್ ಮತ್ತು ವಾಟ್ಸ್‌ಆ್ಯಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿಗಳು ಪ್ರಕಟವಾದರೆ ಅಂತಹ ವಿಷಯಗಳನ್ನು ತೆಗೆದುಹಾಕಲು ಆದೇಶಿಸಬೇಕು ಎಂಬ ಬೇಡಿಕೆಯನ್ನೂ ಸಿದ್ದರಾಮಯ್ಯ ನ್ಯಾಯಾಲಯದ ಮುಂದಿಟ್ಟಿದ್ದಾರೆ.

ಈ ಸಂಬಂಧ ನ್ಯಾಯಾಲಯಕ್ಕೆ 2 ಪ್ರತ್ಯೇಕ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಸುಳ್ಳು ಮಾಹಿತಿಗಳನ್ನು ಡಿಲೀಟ್ ಮಾಡಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಸಲ್ಲಿಸಿರುವ 2 ಮಧ್ಯಂತರ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ 18ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿದೆ. ಅರ್ಜಿಗಳ ಕುರಿತು ಇಂದು ಮಂಗಳವಾರ ಮಧ್ಯಂತರ ಆದೇಶ ಪ್ರಕಟವಾಗಲಿದ್ದು, ಸಿದ್ದರಾಮಯ್ಯ ಕೋರಿರುವ ತಡೆಯಾಜ್ಞೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗಳನ್ನು ತೆಗೆದುಹಾಕುವ ಸಂಬಂಧ ನ್ಯಾಯಾಲಯ ಯಾವ ಆದೇಶ ನೀಡಲಿದೆ ಎಂಬುದು ತಿಳಿಯಲಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor