
ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಐಎಂಡಿ ಬೆಂಗಳೂರು ದಕ್ಷಿಣ ಒಳನಾಡಿನಲ್ಲಿ ಮಳೆಯಾಗು ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಅಧಿಕೃತವಾಗಿ ನಿರ್ಗಮಿಸಿದ್ದು, ಇದರ ಬೆನ್ನಲ್ಲೇ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಮಳೆಯೊಂದಿಗೆ ಹಿಂಗಾರು ಪ್ರವೇಶಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಿಂದ 21ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಅಂತಾ ಹವಾಮಾನ ಇಲಾಖೆ ತಿಳಿಸಿದೆ. ಈ ಪೈಕಿ ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ನಿನ್ನೆ ಗುರುವಾರ ಬಿಡುಗಡೆ ಮಾಡಿರುವ ಬುಲೆಟಿನ್ನಲ್ಲಿ ಅಕ್ಟೋಬರ್ 16ರಂದು ಅಂದರೆ ಇಂದು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ ಎಂದಿದೆ



ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 16ರಿಂದ 21ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಅಕ್ಟೋಬರ್ 17ರಿಂದ 21ರವರೆಗೆ ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

