ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಸಾವಿನ ಪ್ರಕರಣಕ್ಕೆ ಸಡನ್ ಟ್ವಿಸ್ಟ್! ಸಿಸಿಟಿವಿಯಲ್ಲಿ ಕಂಡ ದೃಶ್ಯದಿಂದ ದಾಖಲಾಯ್ತು ಕೊಲೆ ಕೇಸ್

ಹಂಚಿಕೊಳ್ಳಿ
WhatsApp Facebook X Telegram
ಅಪರಾಧ ಸುದ್ದಿಗಳಿಗೆ ಸಂಬಂಧಿಸಿದ ಸಾಂದರ್ಭಿಕ ಚಿತ್ರ
crime news image malenadutoday
dasrara add shivamogga

ಮಲೆನಾಡು ಟುಡೆ ಸುದ್ದಿ / ಮೂಡಿಗೆರೆ / ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೇಟೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದರು. ಈ ಪ್ರಕರಣ ಇದ್ದಕ್ಕಿದ್ದ ಹಾಗೆ ಟ್ವಿಸ್ಟ್ ಆಗಿದೆ. ಆರಂಭದಲ್ಲಿ ಬಸ್ ನಿಲ್ದಾಣದಲ್ಲಿ ಬಿದ್ದು ಮೃತಪಟ್ಟಿದ್ದರು ಎಂದೇ ಹೇಳಲಾಗಿತ್ತು. ಆದರೆ ಇದೀಗ ಇದೊಂದು ಕೊಲೆ ಕೇಸ್ ಆಗಿ ಚೆಂಜ್ ಆಗಿದೆ.

ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಕಾರ್ಲಗದ್ದೆ ನಿವಾಸಿ ರವಿ ಎಂಬವರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು. ಇವರ ಸಾವಿನ ಕುರಿತು ಪತ್ನಿ ನಳಿನಿ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಪೊಲೀಸರು ಸಾವಿನ ಬಗ್ಗೆ ಕೂಲಂಕುಶ ತನಿಖೆಗೆ ಇಳಿದು ಬಸ್​​ಸ್ಟಾಂಡ್ ಸಿಸಿ ಕ್ಯಾಮರಾಗಳನ್ನ ಪರಿಶೀಲಿಸಿದ್ದಾರೆ.ಈ ವೇಳೆ ದೃಶ್ಯದಲ್ಲಿ ಇಬ್ಬರು ವ್ಯಕ್ತಿಗಳು ರವಿ ಅವರನ್ನು ಹಿಂದಿನಿಂದ ತಳ್ಳಿದ ಪರಿಣಾಮ ಅವರು ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಹಾಗಾಗಿ. ಮೃತರ ಪತ್ನಿ ನಳಿನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೂಡಿಗೆರೆ ಪೊಲೀಸರು ಇಬ್ಬರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ

dasrara add shivamogga
dasrara add shivamogga
dasrara add shivamogga
dasrara add shivamogga
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor