ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 29 ರಂದು ಬೆಳಿಗ್ಗೆ 10:00 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಯು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.
ದಿನಾಂಕ: 29-10-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದುಪಿ.ಯು.ಸಿ., ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಪದವಿ ಪಡೆದ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
