ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಗೋಕರ್ಣದ ತದಡಿ ಬಂದರಿನಲ್ಲಿ ದುರಂತ: ಬೋಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು ಮೀನುಗಾರಿಕೆ ಮುಗಿಸಿ ಬಂದ ಬೋಟ್ ಅನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ, ಕೊಳೆತ ಮೀನಿನ ತ್ಯಾಜ್ಯದ ತೀವ್ರ ದುರ್ವಾಸನೆ ಮತ್ತು ವಿಷಗಾಳಿಗೆ ಅಸ್ವಸ್ಥಗೊಂಡು ಮೂವರು ಯುವ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಗೋಕರ್ಣದ ತದಡಿ ಬಂದರಿನಲ್ಲಿ ನಡೆದಿದೆ. ಬೋಟ್‌ನ ಕೋಲ್ಡ್ ಸ್ಟೋರೇಜ್ ಹೊಂಡದಲ್ಲಿದ್ದ ತ್ಯಾಜ್ಯ ತೆರವುಗೊಳಿಸುವಾಗ ಈ ದುರ್ಘಟನೆ ಸಂಭವಿಸಿದ್ದು, ಮತ್ತೊಬ್ಬ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಿಡಿಎಫ್ ನಲ್ಲಿರುವ ಪ್ರಮುಖ ಸುದ್ದಿಗಳು
- ಶಿವಮೊಗ್ಗದಲ್ಲಿ ಎಸ್‌ಐಆರ್ (SIR) ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪೂರ್ಣಗೊಂಡಿದ್ದು, ಪರಿಷ್ಕರಣೆ ಬಳಿಕ ಜಿಲ್ಲೆಯಲ್ಲಿ ಒಟ್ಟು 13,54,046 ಮತದಾರರಿದ್ದಾರೆ. ವಿವಿಧ ಕಾರಣಗಳಿಂದ ಹಾಗೂ ಅಗತ್ಯ ದಾಖಲೆಗಳಿಲ್ಲದೆ ಒಟ್ಟು 1,88,554 ಹೆಸರುಗಳನ್ನು ಕೈಬಿಡಲಾಗಿದ್ದು, ಹೊಸದಾಗಿ 23,753 ಮತದಾರರು ಸೇರ್ಪಡೆಗೊಂಡಿದ್ದಾರೆ.
- ಕುವೆಂಪು ವಿವಿ ಬಿ.ಎಡ್. ಪರೀಕ್ಷೆ ವಿಳಂಬ – ವಿದ್ಯಾರ್ಥಿಗಳ ಆತಂಕ: ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಕುವೆಂಪು ವಿಶ್ವವಿದ್ಯಾಲಯವು ತಕ್ಷಣ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಸಿ ನವೆಂಬರ್ 10ರೊಳಗೆ ಫಲಿತಾಂಶ ಪ್ರಕಟಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.
- ಸ್ಟಿಂಗ್ ಆಪರೇಷನ್ ಪ್ರಕರಣ: ಸಿಬಿಐ ಅಥವಾ ನ್ಯಾಯಾಧೀಶರ ತನಿಖೆಗೆ ಶಾಸಕಿ ಶಾರದಾ ಪೂರ್ಯನಾಯ್ಕ ಆಗ್ರಹ: ರಾಜಕೀಯ ಲಾಭಕ್ಕಾಗಿ ಹಾಗೂ ಮಹಿಳೆಯರ ವೈಯಕ್ತಿಕ ವಿಚಾರಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವ ಸ್ವಿಂಗ್ ಆಪರೇಷನ್ ಪ್ರಕರಣದ ಹಿಂದೆ ಇರುವವರ ಕುರಿತು ಸಿಬಿಐ ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ ಒತ್ತಾಯಿಸಿದ್ದಾರೆ.
- ಪತ್ರಕರ್ತರ ಆರ್ಥಿಕ ಭದ್ರತೆಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ – ವಿಜಯೇಂದ್ರರಾವ್ ಮನವಿ: ರಾಜ್ಯದ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರದಿಗಾರರು, ಗ್ರಾಮೀಣ ಹಾಗೂ ಸ್ವತಂತ್ರ ಪತ್ರಕರ್ತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ನಿವಾರಿಸಲು ‘ಕರ್ನಾಟಕ ಪತ್ರಕರ್ತರ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
- ಶಿವಮೊಗ್ಗದಲ್ಲಿ ಅಕ್ಟೋಬರ್ 28, 29ರಂದು ಕೈಗಾರಿಕಾ ವಸ್ತುಗಳ ಪ್ರದರ್ಶನ: ಮಾಚೇನಹಳ್ಳಿಯ ಉದ್ಯಮ ಭವನದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಾಗೂ ಪ್ರಮುಖ ಖರೀದಿದಾರರೊಂದಿಗೆ ನೇರ ಸಂವಾದ ನಡೆಸಲು ಬೃಹತ್ ವೆಂಡರ್ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತುಗಳ ಪ್ರದರ್ಶನ ಆಯೋಜಿಸಲಾಗಿದೆ.
ಈ ಮೇಲಿರುವ ಎಲ್ಲಾ ಸುದ್ದಿಗಳ ಸಂಪೂರ್ಣ ವಿವರ (ಇ-ಲಿಂಕ್) ನಲ್ಲಿದೆ
