ಮಲೆನಾಡು ಟುಡೆ ಸುದ್ದಿ / ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಗಿರೀಶ್ ಕುಮಾರ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬುಧವಾರ ಮೃತಪಟ್ಟಿದ್ದಾರೆ. ಸುಮಾರು 2 ವಾರಗಳ ಹಿಂದೆ ಗಿರೀಶ್ ಕುಮಾರ್ ಅ ಪಘಾತದಲ್ಲಿ ಗಾಯಗೊಂಡಿದ್ದರು. ಚಿಕ್ಕಾಪುರ ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ದಿನ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮೃತ ಗಿರೀಶ್ ಕುಮಾರ್ ಅವರು ಸಾಲೂರು ಗ್ರಾಮದವರಾಗಿದ್ದು, ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಂದು ಗುರುವಾರ ಅವರ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಗಿರೀಶ್ ಕುಮಾರ್ ಅವರ ನಿಧನಕ್ಕೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಶರತ್ ಹಾಗೂ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿಕಾರಿಪುರ ಪೇಟೆ ಪೊಲೀಸ್ ಸ್ಟೇಷನ್ ಕ್ರೈಂ ಕಾನ್‌ಸ್ಟೇಬಲ್ ಗಿರೀಶ್ ಕುಮಾರ್ ಸಾವು! ದುರಂತ ಘಟನೆ
