ಶಿವಮೊಗ್ಗದಲ್ಲಿ ವಿ ಎಸ್​ ಉಗ್ರಪ್ಪ ಕಾರಿಗೆ ಘೇರಾವ್​ ಸೇರಿದಂತೆ ಇನ್ನಿತರೇ ಸುದ್ದಿಗಳು ಇ -ಪೇಪರ್​​ನಲ್ಲಿ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಕಾರನ್ನು ಭೋವಿ ಸಮಾಜದ ಮುಖಂಡರು ಅಡ್ಡಗಟ್ಟಿ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದಲ್ಲಿ ನಡೆದಿFದೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಮುಗಿಸಿ ತೆರಳುತ್ತಿದ್ದ ವೇಳೆ ಭೋವಿ ಸಮುದಾಯದ ಮುಖಂಡರಾದ ವೀರಭದ್ರಪ್ಪ ಪೂಜಾರ್, ಬೂದಿಗೆರೆ ಬಸವರಾಜ್ ಹಾಗೂ ಇತರರು ವಾಹನವನ್ನು ಸುತ್ತುವರೆದು ಧರಣಿ ನಡೆಸಿದರು. ಒಳಮೀಸಲಾತಿ ವಿಚಾರದಲ್ಲಿ ಭೋವಿ ಸಮಾಜದ ಹೆಸರನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡಲಾಗುತ್ತಿದೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮುಖ್ಯಮಂತ್ರಿಗಳ ಮನೆಯಲ್ಲಿ ಉಗ್ರಪ್ಪ ಹಾಗೂ ಕೆಲವರು ಭೋವಿ ಸಮಾಜದ ಹೆಸರಿನಲ್ಲಿ ನಿಂತು ವಿಡಿಯೋ ಹರಿಬಿಟ್ಟಿರುವುದು ಖಂಡನೀಯವೆಂದ ಅವರು, ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಈ ಹಠಾತ್ ಪ್ರತಿಭಟನೆಯಿಂದ ಆರ್.ಟಿ.ಒ. ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಇದೇ ವೇಳೆ ಮಾತನಾಡಿದ ಉಗ್ರಪ್ಪ, ಮೀಸಲಾತಿ ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಸರ್ವಪಕ್ಷ ನಿಯೋಗ ದೆಹಲಿಗೆ ತೆರಳಬೇಕು ಹಾಗೂ ನಟ ಸುದೀಪ್ ಕುರಿತು ತಾವುಡಿದ ಹೇಳಿಕೆ ವ್ಯಕ್ತಿಕವಲ್ಲ ಎಂದು ಸ್ಪಷ್ಟನೆ ನೀಡಿದರು.

ಪಿಡಿಎಫ್​​ನಲ್ಲಿರುವ ಇನ್ನಿತರೇ ಪ್ರಮುಖ ಸುದ್ದಿಗಳು 

  • ಬರಪೀಡಿತ ರೈತರಿಗೆ ಬಂಪರ್ ನೆರವು – ಸಾಲ ಮರುಪಾವತಿಗೆ 5 ವರ್ಷ ಕಾಲಾವಕಾಶ: ಮುಂಗಾರು ವೈಫಲ್ಯದಿಂದ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಬರಪೀಡಿತವೆಂದು ಘೋಷಣೆಯಾಗಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ರೈತರು ಬೆಳೆಸಾಲ ಮರುಪಾವತಿಸಲು ತೀವ್ರ ಬರಪೀಡಿತ ತಾಲೂಕುಗಳಲ್ಲಿ 60 ತಿಂಗಳು (5 ವರ್ಷ) ಹಾಗೂ ಭಾಗಶಃ ಬರಪೀಡಿತ ತಾಲೂಕುಗಳಲ್ಲಿ 36 ತಿಂಗಳು ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್ ತಿಳಿಸಿದ್ದಾರೆ. ಬ್ಯಾಂಕ್‌ಗಳು ರೈತರ ಮೇಲೆ ಸಾಲ ಮರುಪಾವತಿಗೆ ಬಲವಂತದ ಒತ್ತಡ ಹೇರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
  • ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ವೈದ್ಯಕೀಯ ಸಾಧನೆ – ಮಧ್ಯ ಕರ್ನಾಟಕದಲ್ಲೇ ಪ್ರಥಮ ಲೀಡ್‌ಲೆಸ್ ಪೇಸ್‌ಮೇಕರ್ ಅಳವಡಿಕೆ: ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ 75 ವರ್ಷದ ವೃದ್ಧೆಯೊಬ್ಬರಿಗೆ ಮಧ್ಯ ಕರ್ನಾಟಕದಲ್ಲೇ ಮೊದಲ ಬಾರಿಗೆ ಯಾವುದೇ ತಂತಿಗಳಿಲ್ಲದ (Leadless) ಅತ್ಯಾಧುನಿಕ ಪೇಸ್‌ಮೇಕರ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ ಎಂದು ಹಿರಿಯ ಹೃದ್ರೋಗ ತಜ್ಞ ಡಾ. ಶ್ರೀವತ್ಸ ನಾಡಿಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
  • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾಗಿದ್ದರಿಂದ, 23 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು 20 ವರ್ಷಗಳ ಕಠಿಣ ಕಾರಾಗೃಹವಾಸ ಹಾಗೂ 1,01,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ. ಅಲ್ಲದೆ ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ.
  • ಅಂಗನವಾಡಿ ಕಟ್ಟಡಗಳ ಶೀಘ್ರ ಪೂರ್ಣಗೊಳಿಸಿಕೊಡಲು ಡಿಸಿ ತಾಕೀತು: ಶಿವಮೊಗ್ಗ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ರಕ್ಷಣೆ ಹಾಗೂ ಪೌಷ್ಟಿಕ ಆಹಾರ ವಿತರಣೆಗೆ ಒತ್ತು ನೀಡಲಾಗಿದ್ದು, ಪ್ರಗತಿಯಲ್ಲಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಹಟ್ಟಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
  • ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಿಂದ ₹26.50 ಕೋಟಿ ಅಭಿವೃದ್ಧಿ ಕಾಮಗಾರಿ ಪೂರ್ಣ: ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಳೆದ 5 ವರ್ಷಗಳ ಆಡಳಿತಾವಧಿಯಲ್ಲಿ ಒಟ್ಟು ₹26.50 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ್ ಶೆಟ್ಟಿ ತಿಳಿಸಿದ್ದು, ಕುರುವಳ್ಳಿ ಕಮಾನು ಸೇತುವೆ ಪಕ್ಕದ 23 ಅಲೆಮಾರಿ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದರು.

ಈ ಮೇಲಿನ ಎಲ್ಲಾ ಸುದ್ದಿಗಳ ಸಂಪೂರ್ಣ ವಿವಿರ (ಇ-ಲಿಂಕ್​​) ನಲ್ಲಿದೆ

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor