ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದಲ್ಲಿ ಇವತ್ತು ಅಂದರೆ ಅಕ್ಟೋಬರ್ 30ರಿಂದ ನವೆಂಬರ್ 4ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಬರ ನಿರ್ವಹಣೆಗಾಗಿ ನಾವಿನ್ಯತಾ ಕೃಷಿ ಎಂಬ ಧ್ಯೇಯವಾಕ್ಯದಡಿ ಮೇಳ ಆಯೋಜಿಸಲಾಗ್ತಿದೆ. ಬರ ಪರಿಸ್ಥಿತಿಯಲ್ಲಿ ರೈತರಿಗೆ ಅಗತ್ಯವಿರುವ ಕೃಷಿ ಸಂಬಂಧಿತ ಮಾಹಿತಿ ಒದಗಿಸುವುದು ಮೇಳದ ಪ್ರಮುಖ ಉದ್ದೇಶವಾಗಿದೆ.
ಮೇಳದಲ್ಲಿ ಆಹಾರ ಪದಾರ್ಥಗಳು, ಬಿತ್ತನೆ ಬೀಜಗಳು, ಸಸಿಗಳು ಹಾಗೂ ನರ್ಸರಿಗಳಿಗೆ ಸಂಬಂಧಿಸಿದ ಮಳಿಗೆಗಳು ಇರಲಿವೆ. ವಿವಿಧ ಇಲಾಖೆಗಳ ಸಹಯೋಗದಲ್ಲಿ 600ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ಪ್ರಾಣಿಪ್ರಿಯರಿಗಾಗಿ ವಿಶೇಷ ಶ್ವಾನ ಮೇಳವನ್ನೂ ಆಯೋಜಿಸಲಾಗಿದೆ
ಕೃಷಿ ಮತ್ತು ತೋಟಗಾರಿಕೆ ಮೇಳದ ಉದ್ಘಾಟನಾ ಸಮಾರಂಭ ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಪದ್ಮಶ್ರೀ ಪುರಸ್ಕೃತ ಪ್ರಗತಿಪರ ರೈತ ಸತ್ಯನಾರಾಯಣ ಬೆಳೇರಿ ಮೇಳಕ್ಕೆ ಚಾಲನೆ ನೀಡಲಿದ್ದಾರೆ.
ಸಚಿವರಾದ ಪಿ.ಎಂ. ನರೇಂದ್ರ ಸ್ವಾಮಿ, ಎಸ್. ಮಧು ಬಂಗಾರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಆರು ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಾಸಕಿ ಶಾರದಾ ಪೂರ್ಯಾನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
