ಶಿವಮೊಗ್ಗ : ದೀಪಾವಳಿ ಹಬ್ಬಕ್ಕೆ ಪಟಾಕಿ ಹೊಡಿತಿದ್ದೀರಾ, ಹಾಗದರೆ ಸರ್ಕಾರದ ಈ ನಿಯಮಗಳನ್ನು ಗಮನಿಸಿ, ಇಲ್ಲದಿದ್ರೆ ಕೇಸ್​ ಬೀಳ್ಬೋದು

ಹಂಚಿಕೊಳ್ಳಿ
WhatsApp Facebook X Telegram
Diwali 2026 Firecracker Guidelines
Diwali 2026 Firecracker Guidelines

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಭಾರತೀಯರ ಪ್ರಮುಖ ಹಬ್ಬಗಳಲ್ಲೊಂದಾಗ ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳ ಬಾಕಿ ಇದ್ದು, ಹಬ್ಬದ ಸಂದರ್ಭದಲ್ಲಿ ರಾತ್ರಿ 8:00 ಗಂಟೆಯಿಂದ 10:00 ಗಂಟೆಯವರೆಗೆ  ಮಾತ್ರ ಪಟಾಕಿ ಸಿಡಿಸಲು ರಾಜ್ಯಸರ್ಕಾರ ಅವಕಾಶ ನೀಡಿದೆ. ಆ ನಿಯಮವನ್ನು ಮೀರಿದರೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. 

ಮಾಲಿನ್ಯ ನಿಯಂತ್ರಣ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ, ದೀಪಾವಳಿ ಹಬ್ಬದ ದಿನಗಳಲ್ಲಿ ರಾತ್ರಿ 8:00 ರಿಂದ 10:00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅನುಮತಿ ಇರುತ್ತದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರಕ್ಕೆ ಹಾನಿಯಾಗದಂತೆ ಮಾರುಕಟ್ಟೆಯಲ್ಲಿ ಕೇವಲ ಪರಿಸರ ಸ್ನೇಹಿ ಹಸಿರು ಪಟಾಕಿ  ಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಬಳಸಲು ಅನುಮತಿ ನೀಡಲಾಗಿದೆ. ನಿಷೇಧಿತ ರಾಸಾಯನಿಕಯುಕ್ತ ಹಾಗೂ ಅಧಿಕ ಶಬ್ದದ ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor