ಶಿವಮೊಗ್ಗ: ಪುಸ್ತಕ ತಗೋಬೇಕು ಅಂತಿದ್ದೀರಾ, ಇಲ್ಲಿದೆ ನೋಡಿ 50 ರಷ್ಟು ರಿಯಾಯಿತಿ, ಆನ್​​ಲೈನ್​ನಲ್ಲೂ ಲಭ್ಯ 

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಶಿವಮೊಗ್ಗ ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. 

ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದ್ದು, ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. 

ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in   ನಲ್ಲಿ ಕೂಡ ಈ ಶೇ.50 ರಷ್ಟು ರಿಯಾಯಿತಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ:080-22107705 ನ್ನು ಸಂಪರ್ಕಿಸಬಹುದೆಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor