ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಭದ್ರಾವತಿ ನಗರದ ಮೆಸ್ಕಾಂ ವಿದ್ಯುತ್ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು (ನವೆಂಬರ್ 2) ನಗರದ ವಿವಿಧ ಬಡಾವಣೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಚನ್ನಗಿರಿ ರಸ್ತೆ, ಹೊಳೆಹೊನ್ನೂರು ಮುಖ್ಯ ರಸ್ತೆ, ಇಂದಿರಾನಗರ, ಅನ್ವರ್ ಕಾಲೊನಿ, ದುರ್ಗಿನಗರ, ಅಮೀರ್ಜಾನ್ ಕಾಲೊನಿ, ಮೊಮಿನ್ ಮೊಹಲ್ಲಾ, ಖಲಂದರ್ ನಗರ, ಜಟ್ಪಟ್ ನಗರ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
