ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯಲ್ಲಿ ಖಾಲಿ ಇರುವ 43 ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಹಲವಾರು ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸರ್ಕಾರದ ನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯ ರ್ಥಿಗಳು ತಮ್ಮ ಅರ್ಜಿಗಳನ್ನು ಅಧಿಕೃತ ವೆಬ್‌ಸೈಟ್ https://Sevaone.karnata ka.gov.in/services/login ನಲ್ಲಿ ಆನ್ ಲೈನ್ ಮೂಲಕ ಮಾತ್ರವೇ ಸಲ್ಲಿಸತಕ್ಕದ್ದು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು 2026ರ ನ.15 ಕೊನೆಯ ದಿನಾಂಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದ್ದಾರೆ.
