ನವೆಂಬರ್ 12 ರವರೆಗೂ ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ತಾಳಗುಪ್ಪದವರೆಗೆ ಈ ಸ್ಥಳಗಳಲ್ಲಿ ಸ್ಟಾಪ್ ನೀಡುತ್ತೆ!

ಹಂಚಿಕೊಳ್ಳಿ
WhatsApp Facebook X Telegram
ಯಶವಂತಪುರ-ತಾಳಗುಪ್ಪ ವಿಶೇಷ ರೈಲು ಕಾಯಂ Yesvantpur-Talguppa Special Train Regularised Timings and Details Yesvantpur Talguppa Express, Shivamogga train route, IRCTC Talaguppa
Yesvantpur-Talguppa Special Train Regularised Timings and Details Yesvantpur Talguppa Express, Shivamogga train route, IRCTC Talaguppa

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಯಶವಂತಪುರ–ಶಿವಮೊಗ್ಗ ಟೌನ್–ಯಶವಂತಪುರ ತ್ರಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲನ್ನು (ರೈಲು ಸಂಖ್ಯೆ 16581/16582) ತಾಳಗುಪ್ಪದವರೆಗೆ ತಾತ್ಕಾಲಿಕವಾಗಿ ವಿಸ್ತರಿಸಿದೆ. ನವೆಂಬರ್ 12, 2026 ರವರೆಗೆ ಇದು ಅನ್ವಯವಾಗಲಿದೆ. ಈ ನಿಟ್ಟಿನಲ್ಲಿ ಯಶವಂತಪುರ ಮತ್ತು ಶಿವಮೊಗ್ಗ ಟೌನ್ ನಡುವಿನ ರೈಲಿನ ಸಮಯದಲ್ಲೂ ಯಾವುದೇ ಬದಲಾವಣೆ ಇರುವುದಿಲ್ಲ.

ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು

ರೈಲಿನ ವೇಳಾಪಟ್ಟಿ ಪ್ರಕಾರ, ರೈಲು ಸಂಖ್ಯೆ 16581 ಯಶವಂತಪುರದಿಂದ ಮಧ್ಯರಾತ್ರಿ 12:15ಕ್ಕೆ (00:15) ಹೊರಟು, ಅದೇ ದಿನ ಬೆಳಿಗ್ಗೆ 9:00 ಗಂಟೆಗೆ ತಾಳಗುಪ್ಪ ತಲುಪಲಿದೆ. ಹಿಂದಿರುಗುವ ಮಾರ್ಗದಲ್ಲಿ ರೈಲು ಸಂಖ್ಯೆ 16582 ತಾಳಗುಪ್ಪದಿಂದ ರಾತ್ರಿ 10:00 ಗಂಟೆಗೆ (22:00) ಹೊರಟು, ಯಶವಂತಪುರವನ್ನು ತನ್ನ ಈಗಿರುವ ನಿಗದಿತ ಸಮಯದಂತೆ ತಲುಪಲಿದೆ.

ಈ ರೂಟಲ್ಲಿ ಕೋನಗವಳ್ಳಿ, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಳು, ಆನಂದಪುರಂ, ಅಡ್ಡೇರಿ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor