ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ವಿದ್ಯುತ್ ಅವಘಡದಿಂದ 200ಕ್ಕೂ ಹೆಚ್ಚು ಕೋಳಿ ಹಾಗೂ 200ಕ್ಕೂ ಹೆಚ್ಚು ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸುರನಗಿ ಗ್ರಾಮದಲ್ಲಿ ನಡೆದಿದೆ.
ಮಾಲೀಕ ರಾಮಣ್ಣ ಎಂಬುವವರು ಸುರನಗಿ ಗ್ರಾಮದಲ್ಲಿ ಕುರಿ ಹಾಗೂ ಕೋಳಿಗಳನ್ನು ಸಾಕಲು ಶೆಡ್ ನಿರ್ಮಿಸಿಕೊಂಡಿದ್ದರು. ನಿನ್ನೆ ತಡರಾತ್ರಿ ಶೆಡ್ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಇದರ ಪರಿಣಾಮ ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡು, ಶೆಡ್ನಲ್ಲಿದ್ದ ಸುಮಾರು 200ಕ್ಕೂ ಹೆಚ್ಚು ಕುರಿಗಳು ಮತ್ತು 200ಕ್ಕೂ ಹೆಚ್ಚು ಕೋಳಿಗಳು ಸುಟ್ಟುಹೋಗಿವೆ.
ಲಕ್ಷಾಂತರ ರೂಪಾಯಿ ಮೌಲ್ಯದ ಕುರಿ ಹಾಗೂ ಕೋಳಿಗಳು ಸುಟ್ಟುಹೋಗಿರುವುದರಿಂದ ತಮಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕೆಂದು ರಾಮಣ್ಣ ಆಗ್ರಹಿಸಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
