ಮಲೆನಾಡು ಟುಡೆ ಸುದ್ದಿ / ಬೆಂಗಳೂರು/ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ನ.10 ಕೊನೆ ಯ ದಿನವಾಗಿದ್ದು, ಬಾಕಿ ಇರು ವಪಡಿತರಚೀಟಿದಾರರುಕೊನೆ ಯ ದಿನಾಂಕದೊಳಗೆ ತಪ್ಪದೇ ಇ-ಕೆವೈಸಿ ಮಾಡಿಸಬೇಕೆಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇ-ಕೆವೈಸಿ ಮಾಡಿಸಬೇಕಿದ್ದ 2,67,64,276 ಪಡಿತರ ಚೀಟಿಫಲಾನುಭವಿಗಳ ಪೈಕಿ, ನ.3ರವರೆಗೆ 2.26ಕೋಟಿಗೂ ಅಧಿಕ ಫಲಾನುಭವಿಗಳು ಇ-ಕೆವೈಸಿಮಾಡಿ ಸಿದ್ದಾರೆ. ಇನ್ನೂ 41,33,529 ಫಲಾನುಭವಿ ಗಳುಇ-ಕೆವೈಸಿಮಾಡಿಸಬೇಕಿದೆ.ಈಗಾಗಲೇ ಒಂದು ಬಾರಿ ಇ-ಕೆವೈಸಿ ಮಾಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ನ.10 ಕೊನೆಯ ದಿನವಾಗಿದೆ. ನಂತರ ಅವಧಿ ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಇ-ಕೆವೈಸಿ ಮಾಡಿಸಲು ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊ ಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿ ಗಳಲ್ಲಿ ‘ಆಹಾರ’ ತಂತ್ರಾಂಶದ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
