ಶಿವಮೊಗ್ಗ ; ಹಬ್ಬಕ್ಕೆ ಪಟಾಕಿ ಮಾರ್ತಿದ್ದೀರ : ಹಾಗಾದ್ರೆ ಈ ಕಾನೂನನ್ನು ಗಮನಿಸಿ : ಇಲ್ದಿದ್ರೆ ಬೀಳುತ್ತೆ ಕೇಸ್​ ?  

ಹಂಚಿಕೊಳ್ಳಿ
WhatsApp Facebook X Telegram
Shivamogga Firecracker Sellers Warning
Shivamogga Firecracker Sellers Warning

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ :  ದೀಪಾವಳಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಜಿಲ್ಲೆ ಹಾಗೂ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ, ಮಾರಾಟ ಹಾಗೂ ಇತರ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ. 

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಪ್ರಕಾರ, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ (ಪಟಾಕಿ ಮಾರಾಟ/ತಯಾರಿಕೆ ಸೇರಿದಂತೆ) ಕೆಲಸಕ್ಕೆ ನಿಯೋಜಿಸುವುದು ಕಾನೂನುಬಾಹಿರವಾಗಿದೆ. 

ಒಂದು ವೇಳೆ ಪಟಾಕಿ ಮಳಿಗೆಗಳಲ್ಲಿ ಅಥವಾ ತಯಾರಿಕಾ ಘಟಕಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡಿರುವುದು ಕಂಡುಬಂದರೆ, ಸಂಬಂಧಪಟ್ಟ ಮಾಲೀಕರ ವಿರುದ್ಧ ಬಾಲಕಾರ್ಮಿಕ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಎಚ್ಚರಿಸಿದೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor