ಎನ್‌ಡಿಎ ಪರೀಕ್ಷೆ: ಮಹಿಳಾ ವಿಭಾಗದಲ್ಲಿ ದೇಶಕ್ಕೆ ಫಸ್ಟ್​ ರ‍್ಯಾಂಕ್‌ ಪಡೆದ ಶಿವಮೊಗ್ಗದ ಶ್ರೇಯಾ ಎನ್. ಗೌಡ

ಹಂಚಿಕೊಳ್ಳಿ
WhatsApp Facebook X Telegram
How did Shivamogga's Shreya N Gowda secure the All India Rank 1 in the women's category of the UPSC NDA 1 2026 examination
How did Shivamogga's Shreya N Gowda secure the All India Rank 1 in the women's category of the UPSC NDA 1 2026 examination

ಸುದ್ದಿಯ ಸ್ಥಳ: Bhadravati, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಇಂದು ಪ್ರಕಟಿಸಿದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಮತ್ತು ನೇವಲ್ ಅಕಾಡೆಮಿ ಪರೀಕ್ಷೆ (1) 2026ರ ಅಂತಿಮ ಫಲಿತಾಂಶದಲ್ಲಿ ಭದ್ರಾವತಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಶ್ರೇಯಾ ಎನ್. ಗೌಡ ಅವರು ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.

2026ರ ಏಪ್ರಿಲ್ 12ರಂದು ನಡೆದ ಲಿಖಿತ ಪರೀಕ್ಷೆ ಹಾಗೂ ತದನಂತರ ನಡೆದ ಎಸ್‌ಎಸ್‌ಬಿ ಸಂದರ್ಶನದ ಆಧಾರದ ಮೇಲೆ ಒಟ್ಟು 617 ಅಭ್ಯರ್ಥಿಗಳು ಪ್ರವೇಶಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಲ್ಲಿ 551 ಪುರುಷರು ಹಾಗೂ 66 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. ಪುರುಷರ ವಿಭಾಗದಲ್ಲಿ ಇಶಾನ್ ಪಚೌರಿ ಮೊದಲ ಸ್ಥಾನ ಪಡೆದಿದ್ದಾರೆ.

ಶ್ರೇಯಾ ಎನ್. ಗೌಡ ರವರ ಪರಿಚಯ

ಶ್ರೇಯಾ ತಮ್ಮ ಮೊದಲ ಪ್ರಯತ್ನದಲ್ಲೇ ಎನ್‌ಡಿಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. 8ನೇ ತರಗತಿಯಲ್ಲಿ ಓದುತ್ತಿದ್ದಾಗಲೇ ಸಿದ್ಧತೆ ಆರಂಭಿಸಿದ್ದ ಶ್ರೇಯಾ ಪ್ರಸ್ತುತ ಮಂಗಳೂರಿನ ಸುರತ್ಕಲ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ.

1ರಿಂದ 10ನೇ ತರಗತಿವರೆಗೆ ಭದ್ರಾವತಿಯ ಬಿಜಿಎಸ್ ಕಾರೇಹಳ್ಳಿ ಶಾಲೆಯಲ್ಲಿ ವಿದ್ಯಾಭ್ಯಾಸ ಪೂರೈಸಿದ್ದ ಇವರು ಬಳಿಕ ಬೆಂಗಳೂರಿನ ರಾಜಾಜಿನಗರದ ಬೇಸ್ ಪಿಯು ಕಾಲೇಜಿನಲ್ಲಿ ಪಿಯುಸಿ ಪೂರ್ಣಗೊಳಿಸಿದ್ದರು.

ಶ್ರೇಯಾ ಅವರ ತಂದೆ ನಾಗೇಂದ್ರ ಜೆ. ಅವರು ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದಾರೆ. ತಾಯಿ ಡಾ. ಆಶಾ ಬಿ.ಎಂ. ಅವರು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor