ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿ ಹಾಪ್‌ಕಾಮ್ಸ್ ನ ಎಕ್ಸ್​ಕ್ಲ್ಯೂಸಿವ್​ ಮಳಿಗೆ ಓಪನ್! ಇಲ್ಲಿ ಏನೆಲ್ಲಾ ಸಿಗುತ್ತೆ ಗೊತ್ತಾ?

ಹಂಚಿಕೊಳ್ಳಿ
WhatsApp Facebook X Telegram
OPCOMS New Outlet Opens at Gandhi Park Shivamogga for Exotic Fruits
OPCOMS New Outlet Opens at Gandhi Park Shivamogga for Exotic Fruits

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಗಾಂಧಿ ಪಾರ್ಕ್ ಆವರಣದಲ್ಲಿ ಹಾಪ್‌ಕಾಮ್ಸ್ (HOPCOMS) ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ದೇಶಿ ಹಾಗೂ ವಿದೇಶಿ ತಳಿಗಳ ಹಣ್ಣುಗಳ ಮತ್ತು ಜ್ಯೂಸ್ ಮಾರಾಟ ಮಳಿಗೆ ಇಂದು ಓಪನ್ ಆಗಿದೆ. ವಾಯುವಿಹಾರಕ್ಕೆ ಬರುವ ನಾಗರಿಕರು, ಹಿರಿಯರು ಸೇರಿದಂತೆ, ಸಾರ್ವಜನಿಕರಿಗೆ ಉತ್ಕೃಷ್ಟ ಗುಣಮಟ್ಟದ ದೇಸಿ ಹಾಗೂ ಪೌಷ್ಟಿಕಾಂಶಯುಕ್ತ ವಿದೇಶಿ ತಳಿಗಳ ತಾಜಾ ಹಣ್ಣುಗಳನ್ನು ಒಂದೇ ಸೂರಿನಡಿ ನ್ಯಾಯಯುತ ದರದಲ್ಲಿ ಒದಗಿಸಲು ಈ ಮಳಿಗೆ ಅತ್ಯಂತ ಸಹಕಾರಿಯಾಗಲಿದೆ.

ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ಪ್ರಧಾನ ಕಚೇರಿಯ ಕೆಳಭಾಗದಲ್ಲಿ ಈ ಮಳಿಗೆಯನ್ನು ಆರಂಭಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್. ವಿಜಯಕುಮಾರ್ ತಿಳಿಸಿದ್ದಾರೆ. ಆಯಾ ಸೀಸನ್‌ಗೆ ತಕ್ಕಂತೆ ಸಿಗುವ ಎಲ್ಲಾ ಬಗೆಯ ಹಣ್ಣುಗಳನ್ನು ಈ ಮಳಿಗೆಯಲ್ಲಿ ಮಾರಾಟಕ್ಕೆ ಇರಿಸಲಾಗುತ್ತದೆ. ಮಾರುಕಟ್ಟೆಯಲ್ಲಿ ದೊರೆಯುವ ಲಿಚ್ಚಿ, ರಾಂಬುಟಾನ್, ಲಾಂಗನ್, ಆಸ್ಟ್ರೇಲಿಯನ್ ದ್ರಾಕ್ಷಿ, ಸ್ಟಾರ್‌ಫ್ರೂಟ್, ಡ್ರ್ಯಾಗನ್ ಫ್ರೂಟ್, ಚೆರ್ರಿ, ಮ್ಯಾಂಡರಿನ್, ಕಿವಿ, ಸೀಡ್‌ಲೆಸ್ ದ್ರಾಕ್ಷಿ, ನೇರಳೆ, ಬ್ಲೂಬೆರ್ರಿ ಹಾಗೂ ಸ್ಟ್ರಾಬೆರಿಯಂತಹ ಅನೇಕ ಬಗೆಯ ದೇಶಿ ಮತ್ತು ವಿದೇಶಿ ಹಣ್ಣುಗಳು ಇಲ್ಲಿ ಲಭ್ಯವಾಗಲಿವೆ. ಇದರೊಂದಿಗೆ ತಾಜಾ ಹಣ್ಣಿನ ಜ್ಯೂಸ್ ಕೂಡ ಮಾರಾಟ ಮಾಡಲಾಗುವುದು ಹಾಗೂ ಗುಣಮಟ್ಟದ ಹಣ್ಣುಗಳನ್ನು ಗ್ರಾಹಕರಿಗೆ ಒಂದೇ ಕಡೆ ಒದಗಿಸಲಾಗುವುದು ಅಂತಾ ಅವರು ವಿವರಿಸಿದ್ದಾರೆ.

ಇನ್ನೂ ಇವತ್ತು ಮಳಿಗೆಯನ್ನ ಶಾಸಕ ಎಸ್​ ಎನ್​ ಚನ್ನಬಸಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ನಮ್ಮ ರೈತರು ಬೆಳೆದ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದರ ಜೊತೆಗೆ, ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಈ ಮಳಿಗೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆ ಹಾಗೂ ಹಾಪ್‌ಕಾಮ್ಸ್‌ನ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ನಗರದ ನಾಗರೀಕ ಬಂಧುಗಳು ಉಪಸ್ಥಿತರಿದ್ದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor