ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಹಾಲಪ್ಪ ಅವರು ಶನಿವಾರ ಅಧಿಕಾರ ಸ್ವೀಕರಿಸಲಿದ್ದಾರೆ.
ನವೆಂಬರ್ 07ರ ಶನಿವಾರ ಅಂದರೆ ಇಂದು ಮಧ್ಯಾಹ್ನ 12:00 ಗಂಟೆಗೆ ಶಿವಮೊಗ್ಗದ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಕಾರ್ಯಾಲಯದಲ್ಲಿ ಈ ಅಧಿಕಾರ ಸ್ವೀಕಾರ ಸಮಾರಂಭ ನೆರವೇರಲಿದೆ.
ಈ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ಮುಖಂಡರು, ಪ್ರಮುಖ ನಾಯಕರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ವಿನಂತಿಸಿಕೊಂಡಿದೆ.
