ಇಂದು ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ 96ನೇ ಜನ್ಮದಿನಾಚರಣೆ

ಹಂಚಿಕೊಳ್ಳಿ
WhatsApp Facebook X Telegram
JH Patel 96th Birth Anniversary Programme in Bhadravathi on November 12
JH Patel 96th Birth Anniversary Programme in Bhadravathi on November 12

ಸುದ್ದಿಯ ಸ್ಥಳ: Bhadravati, Shivamogga, Karnataka

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಜೆ.ಎಚ್ ಪಟೇಲ್ ಅಭಿಮಾನಿ ಬಳಗದಿಂದಪ್ರತಿ ವರ್ಷದಂತೆ ಈ ಬಾರಿ ಸಹ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ನಾಯಕ ಜೆ.ಎಚ್ ಪಟೇಲ್ ರವರ 96ನೇ ಜನ್ಮದಿನಾಚರಣೆ ನ.12ರ ಗುರುವಾರ ಹಮ್ಮಿಕೊಳ್ಳಲಾಗಿದೆ.

ನ್ಯೂಟೌನ್ ಶ್ರೀ ಕೃಷ್ಣ ದೇವಸ್ಥಾನ (ಮೆಸ್ ಹೋಟೆಲ್ ವೃತ್ತ ) ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್‌ನಲ್ಲಿ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅಭಿಮಾನಿ ಬಳಗದ ಮುಖ್ಯಸ್ಥ ಶಶಿಕುಮಾರ್‌ಎಸ್‌ ಗೌಡ ಅಧ್ಯಕ್ಷತೆ ವಹಿಸಲಿದ್ದು, ಉದ್ಯಮಿ ಬಿ.ಕೆ.ಜಗನ್ನಾಥ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವವರು. ಸುರಕ್ಷಾ ಜೀವನ ಟ್ರಸ್ಟ್‌ ಅಧ್ಯಕ್ಷೆ ಡಾ. ಜ್ಯೋತಿ ಸೋಮಶೇಖರ್‌ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ಸಂಸ್ಥಾಪಕ ಅಧ್ಯಕ್ಷ ಡಿ.ಜೆ ಪ್ರಭು ಹಾಗು ಯುವ ಮುಖಂಡ ಬಾಬು ದೀಪಕ್ ಕುಮಾರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಅಭಿಮಾನಿ ಬಳಗ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor