ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಪ್ರಮುಖ ರಸ್ತೆಗಳಲ್ಲಿ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮುಂದುವರಿಸಿದ್ದಾರೆ. ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ ಹಾಗೂ ಬಿ.ಎಚ್. ರಸ್ತೆಯಲ್ಲಿ ರಸ್ತೆ ಬದಿಯ ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಫುಟ್‌ಪಾತ್ ಒತ್ತುವರಿ ತೆರವು
ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್‌ಗಳನ್ನು ಆಕ್ರಮಿಸಿಕೊಂಡಿದ್ದ ಅಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳ ತೆರವುಗೊಳಿಸುವಂತೆ ಸೂಚಿಸಲಾಯಿತು. ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ ಹಾಗೂ ಬಿ.ಎಚ್. ರಸ್ತೆಯಲ್ಲಿ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ರಸ್ತೆ ಬದಿಗಳನ್ನು ಬಳಸಿಕೊಳ್ಳಲಾಗಿತ್ತು. ಹಬ್ಬಗಳ ಹಿನ್ನೆಲೆಯಲ್ಲಿ ಈ ಒತ್ತುವರಿ ತುಸು ಜಾಸ್ತಿಯೇ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಂಚಾರಿ ಪೊಲೀಸ್ ವಿಭಾಗ ತಿಳಿಸಿದೆ.
