ಶಿವಮೊಗ್ಗ : ಪೇಶೆಂಟ್ ಕಡೆಯವರನ್ನು ಒಳಗೆ ಬಿಟ್ಟಿಲ್ಲ ಎಂದು ಮೆಗ್ಗಾನ್ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ?

ಹಂಚಿಕೊಳ್ಳಿ
WhatsApp Facebook X Telegram
New Super Speciality Services at McGann Hospital, including Plastic, Cancer, Neuro, and Pediatric surgery, offering free treatment for BPL cardholders under the AB-ARK scheme woman arrested in meggan hospital child case Shivamogga is Malnad Regional Health Hub july 24 Unidentified Body Found in Shivamogga: Police Seek Public Help
Unidentified Body Found in Shivamogga: Police Seek Public Help

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಪೇಷೆಂಟ್ ಕಡೆಯವರನ್ನು ಒಳಗೆ ಬಿಟ್ಟಿಲ್ಲ ಎಂದು ಮೆಗ್ಗಾನ್ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಮೇಲೆ ಮೂವರು ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಫ್ಐಆರ್‌ನಲ್ಲಿ ಇರುವಂತೆ, ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದಾಗ ಆ್ಯಕ್ಸಿಡೆಂಟ್ ಕೇಸ್ ಒಂದು ಮೆಗ್ಗಾನ್ ಆಸ್ಪತ್ರೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮೊದಲು ರೋಗಿಯೊಂದಿಗೆ ಮೂವರು ಬಂದಿದ್ದು, ಅವರನ್ನು ಒಳಗೆ ಬಿಟ್ಟಿದ್ದಾರೆ. ಅದಾದ ಕೆಲ ಸಮಯದ ನಂತರ ಇನ್ನೂ ಮೂವರು ರೋಗಿಯನ್ನು ನೋಡಲು ಆಸ್ಪತ್ರೆಗೆ ಬಂದಿದ್ದಾರೆ ಎನ್ನಲಾಗಿದೆ. ಆಗ ಸೆಕ್ಯೂರಿಟಿ ಗಾರ್ಡ್, ನಿಮ್ಮನ್ನು ಒಳಗೆ ಬಿಡಲು ಸಾಧ್ಯವಿಲ್ಲ, ರೋಗಿಗೆ ತೊಂದರೆ ಆಗುತ್ತದೆ ಎಂದಿದ್ದಾರೆ. ಇದಕ್ಕೆ ಕೋಪಗೊಂಡ ಮೂವರು ಆರೋಪಿಗಳು ಸೆಕ್ಯೂರಿಟಿ ಗಾರ್ಡ್ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ ಎಂದು ಸೆಕ್ಯೂರಿಟಿ ಗಾರ್ಡ್ ದೂರಿನಲ್ಲಿ ಆರೋಪಿಸಿದ್ದಾರೆ.

ಹಾಗೆಯೇ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor