ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.13 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
