ಸುದ್ದಿಯ ಸ್ಥಳ: Soraba, Shivamogga, Karnataka
ಮಲೆನಾಡು ಟುಡೆ ಸುದ್ದಿ | ಸೊರಬ | ಸೊರಬ ತಾಲೂಕಿನ ಸೊರಬ, ಉಳವಿ ಹಾಗೂ ಮಾವಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ತ್ರೈಮಾಸಿಕ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು (ನವೆಂಬರ್ 13) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಉಳವಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕವಿಪ್ರನಿಸಿ ವತಿಯಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ ಉಳವಿ ಪಟ್ಟಣದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನೂ ನಡೆಸಲಾಗುತ್ತದೆ. ಈ ಕಾಮಗಾರಿಗಳ ಹಿನ್ನೆಲೆಯಲ್ಲಿ ಸಂಬಂಧಪಟ್ಟ ವಿದ್ಯುತ್ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಗೆ ತಾತ್ಕಾಲಿಕ ಅಡಚಣೆ ಉಂಟಾಗಲಿದೆ.ಇದಲ್ಲದೆ, ಜೋಗದಿಂದ ಬಳ್ಳಿಗಾವಿವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಮಾರ್ಗದಲ್ಲಿಯೂ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೊರಬ, ಉಳವಿ ಹಾಗೂ ಮಾವಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯ ವಿವಿಧ ಫೀಡರ್‌ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸೊರಬ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿ
ಸೊರಬ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಬಂಧಿಸಿದ ಎಫ್-2 ಸಾರೇಕೊಪ್ಪ, ಎಫ್-3 ಬಳಿಬೈಲು, ಎಫ್-6 ಹಾಲಗಳಲೆ, ಎಫ್-8 ಕುಪ್ಪೆ, ಎಫ್-10 ಕುಂದಗಸವಿ, ಎಫ್-12 ಉರಗನಹಳ್ಳಿ, ಎಫ್-13 ಆಂಡಿಗೆ, ಎಫ್-14 ಕೊಡಕಣಿ, ಎಫ್-23 ತಾವರೆಹಳ್ಳಿ, ಎಫ್-24 ಕಕ್ಕರಸಿ ಹಾಗೂ ಎಫ್-25 ನಡಹಳ್ಳಿ ಫೀಡರ್‌ಗಳ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ
ಉಳವಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿ
ಉಳವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಬರಗಿ ಎನ್‌ಜೆವೈ, ಎಫ್-2 ಕಾನಹಳ್ಳಿ, ಎಫ್-3 ಉಳವಿ, ಎಫ್-4 ಹೊಸಬಾಳೆ ಹಾಗೂ ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಮಾವಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿ
ಮಾವಲಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಬಂಧಿಸಿದ ಎಫ್-1 ಹರೂರು, ಎಫ್-3 ಮನಮನೆ, ಎಫ್-4 ಗೇರುಕೊಪ್ಪ ಹಾಗೂ ಎಫ್-5 ಮಾವಲಿ ಫೀಡರ್‌ಗಳ ವ್ಯಾಪ್ತಿಯಲ್ಲಿಯೂ ವಿದ್ಯುತ್ ಪೂರೈಕೆಗೆ ಅಡಚಣೆಯಾಗಲಿದೆ. ನವೆಂಬರ್ 13ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.
