ಶಿಕಾರಿಪುರದ ಕಪ್ಪನಹಳ್ಳಿಯಲ್ಲಿ ಮಹಿಳೆ ಆತ್ಮಹತ್ಯೆ; ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ ತಾಯಿ

ಹಂಚಿಕೊಳ್ಳಿ
WhatsApp Facebook X Telegram
malenadutoday image
malenadutoday image

ಸುದ್ದಿಯ ಸ್ಥಳ: Shikaripura, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿಕಾರಿಪುರ / ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಸಣ್ಣ ಹೋಟೆಲ್ ನಡೆಸುತ್ತಿದ್ದ ಅಂಜಲಿ (30) ಎಂಬ ಮಹಿಳೆ ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಪ್ಪನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ್ ಹಾಗೂ ಅಂಜಲಿ ಹಲವು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ದಂಪತಿ ಗ್ರಾಮದಲ್ಲಿ ಕಬಾಬ್ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು.

ಹೋಟೆಲ್ ವ್ಯಾಪಾರ ನಡೆಸುತ್ತಿದ್ದ ದಂಪತಿ ಹಲವರಿಂದ ಸಾಲ ಪಡೆದಿದ್ದರು ಎನ್ನಲಾಗಿದೆ. ಆದರೆ, ಅಂಜಲಿ ಅವರ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಲಭ್ಯ ಮಾಹಿತಿಯಿಂದ ತಿಳಿದುಬಂದಿಲ್ಲ.

ಮೃತ ಅಂಜಲಿ ಅವರಿಗೆ 4 ವರ್ಷದ ಹಾಗೂ 7 ತಿಂಗಳ ಇಬ್ಬರು ಗಂಡು ಮಕ್ಕಳಿದ್ದಾರೆ. ಗುರುವಾರ ಮನೆಯಲ್ಲಿ ಅಂಜಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಿದ್ದಾರೆ.

ಸಹಾಯವಾಣಿ ಮಾಹಿತಿ: ಖಿನ್ನತೆ, ತೀವ್ರ ಮಾನಸಿಕ ಒತ್ತಡ ಅಥವಾ ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿರುವವರು ಟೆಲಿ-ಮಾನಸ್ ಸಹಾಯವಾಣಿ 14416 ಅಥವಾ 080-25497777, 98864 44075 ಸಂಖ್ಯೆಗಳಿಗೆ ಸಂಪರ್ಕಿಸಬಹುದು.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor