ಶಿವಮೊಗ್ಗ : ರಸ್ತೆ ಬದಿಯಲ್ಲಿ ನಿಂತಿದ್ದ ವೃದ್ದನಿಗೆ ಬೈಕ್​​ ಡಿಕ್ಕಿ : ಸ್ಥಳದಲ್ಲೇ ಸಾವು

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸುದ್ದಿ ಸಾಂದರರ್ಭಿಕ ಚಿತ್ರ
ಮಲೆನಾಡು ಟುಡೆ ಸುದ್ದಿ ಸಾಂದರರ್ಭಿಕ ಚಿತ್ರ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಹರಿಗೆಯ ಬಿ.ಹೆಚ್. ರಸ್ತೆಯಲ್ಲಿ ನಡೆದಿದೆ. ಹರಿಗೆ ನಿವಾಸಿ ಜಯಣ್ಣ (62) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. 

ಜಯಣ್ಣ ಅವರು ಬಿ.ಹೆಚ್. ರಸ್ತೆಯಲ್ಲಿ ರಸ್ತೆ ದಾಟುವ ಸಲುವಾಗಿ ಬದಿಯಲ್ಲಿ ನಿಂತಿದ್ದ ಸಂದರ್ಭದಲ್ಲಿ, ಬೈಕ್​ ಒಂದು ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಜಯಣ್ಣ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೂ ಮುನ್ನವೇ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಸವಾರನ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor