ಸುದ್ದಿಯ ಸ್ಥಳ: Thirthahalli, Shivamogga, Karnataka
ಮಲೆನಾಡು ಟುಡೆ ಸುದ್ದಿ / ರಿಪ್ಪನ್ಪೇಟೆ : ರಿಪ್ಪನ್ಪೇಟೆಯ ಗುಡ್ ಶೆಫರ್ಡ್ ಚರ್ಚ್ ಸಮೀಪ ಲಾರಿಯನ್ನು ಓವರ್ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಇಂದಿರಾ ಕೋಂ ಆನಂದ್ ಎಂದು ಗುರುತಿಸಲಾಗಿದೆ.
ಘಟನೆಯ ವಿವರ ನೋಡುವುದಾದರೆ, ಖಾಸಗಿ ಬಸ್ಸೊಂದು ತೀರ್ಥಹಳ್ಳಿ ಕಡೆಯಿಂದ ಸಾಗರದತ್ತ ತೆರಳುತ್ತಿದ್ದ ವೇಳೆ ಗುಡ್ ಶೆಫರ್ಡ್ ಚರ್ಚ್ ಸಮೀಪ ಲಾರಿಯನ್ನು ಓವರ್ಟೇಕ್ ಮಾಡಲು ಮುಂದಾಗಿದೆ. ಈ ಸಂದರ್ಭದಲ್ಲಿ ಅಲ್ಲಿಯೇ ಪಕ್ಕದಲ್ಲಿ ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಪರಿಣಾಮ ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಗಾಯಾಳುವನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಘಟನೆ ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
