ಭದ್ರಾವತಿಯಲ್ಲಿ ಎರಡು ದಿನ ಹಾಗೂ ಶಿವಮೊಗ್ಗದ ಹಲವು ಕಡೆ ಇಂದು ವಿದ್ಯುತ್ ವ್ಯತ್ಯಯ!

ಹಂಚಿಕೊಳ್ಳಿ
WhatsApp Facebook X Telegram
Power Cutಸಾಂದರ್ಭಿಕ ಚಿತ್ರ
Power Cutಸಾಂದರ್ಭಿಕ ಚಿತ್ರ

ಸುದ್ದಿಯ ಸ್ಥಳ: Bhadravati, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ಭದ್ರಾವತಿ ಹಾಗೂ ಸಾಗರ ತಾಲ್ಲೂಕಿನ ತುಮರಿ ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ ಮೆಸ್ಕಾಂ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿ ಪ್ರಕಾರ, ಭದ್ರಾವತಿಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನವೆಂಬರ್ 17 ಹಾಗೂ 18ರಂದು ಎರಡು ದಿನ ವಿದ್ಯುತ್ ವ್ಯತ್ಯಯವಾಗಲಿದ್ದು, ತುಮರಿ ಭಾಗದ ಗ್ರಾಮಗಳಲ್ಲಿ ನವೆಂಬರ್ 17ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಗೆ ಅಡಚಣೆಯಾಗಲಿದೆ.

  • ಭದ್ರಾವತಿ ಮೆಸ್ಕಾಂ ನಗರ ಹಾಗೂ ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 17 ಮತ್ತು 18ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಬಡಾವಣೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
  • ಭದ್ರಾವತಿ ನಗರದ ಚನ್ನಗಿರಿ ರಸ್ತೆ, ಹೊಳೆಹೊನ್ನೂರು ಮುಖ್ಯ ರಸ್ತೆ, ಇಂದಿರಾ ನಗರ, ಅನ್ವರ್ ಕಾಲೋನಿ, ದುರ್ಗಿನಗರ, ಅಮೀರ್‌ಜಾನ್ ಕಾಲೋನಿ, ಮೊಮಿನ್ ಮೊಹಲ್ಲಾ, ಖಲಂದರ್‌ನಗರ ಹಾಗೂ ಜಟ್‌ಪಟ್ ನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಗೆ ಅಡಚಣೆಯಾಗಲಿದೆ.
  • ಇದರೊಂದಿಗೆ ಬಾಬಳ್ಳಿ, ಗೌಡ್ರಳ್ಳಿ, ಲಕ್ಷ್ಮೀಪುರ, ಮಜ್ಜಿಗೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಭಾಗಗಳಲ್ಲಿ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ನಡೆಯಲಿದೆ.

ಇನ್ನೊಂದೆಡೆ ಸಾಗರ ತಾಲ್ಲೂಕಿನ ತುಮರಿ ಸಮೀಪದ ಬ್ಯಾಕೋಡು 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಪ್ರಸರಣ ವಿಭಾಗದ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೋಗ ಉಪವಿಭಾಗದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನವೆಂಬರ್ 17ರ ಮಂಗಳವಾರ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.ಜೋಗ ಉಪವಿಭಾಗಕ್ಕೆ ಒಳಪಡುವ ಎಸ್.ಎಸ್. ಭೋಗ್, ತುಮರಿ, ಕುದರೂರು ಹಾಗೂ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬ್ಯಾಕೋಡು ವಿದ್ಯುತ್ ವಿತರಣಾ ಕೇಂದ್ರದ ಪ್ರಸರಣ ವಿಭಾಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor