ಶೃತಿ ಮೋಟಾರ್ಸ್, ಇಂಡಸ್‌ಇಂಡ್ ಬ್ಯಾಂಕ್‌ನಿಂದ ನೇಮಕಾತಿ, ನ.19ರಂದು ನೇರ ಸಂದರ್ಶನ;

ಹಂಚಿಕೊಳ್ಳಿ
WhatsApp Facebook X Telegram
shivamogga Job Fair ಉದ್ಯೋಗ ಸಂದರ್ಶನದ ಚಿತ್ರ
shivamogga Job Fair ಉದ್ಯೋಗ ಸಂದರ್ಶನದ ಚಿತ್ರ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಉದ್ಯೋಗ ಹುಡುಕುತ್ತಿರುವ ಯುವಕ–ಯುವತಿಯರಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 19ರಂದು ನೇರ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ. ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಈ ಸಂದರ್ಶನ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ನ.19ರಂದು ನೇರ ಸಂದರ್ಶನ

  • ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದಲ್ಲಿ ನಡೆಯಲಿರುವ ಈ ನೇರ ಸಂದರ್ಶನದಲ್ಲಿ ಶೃತಿ ಮೋಟಾರ್ಸ್ ಪ್ರೈ.ಲಿ. ಹಾಗೂ ಇಂಡಸ್‌ಇಂಡ್ ಬ್ಯಾಂಕ್ ಪ್ರೈ.ಲಿ. ಕಂಪನಿಗಳು ಭಾಗವಹಿಸಲಿವೆ. ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
  • ನವೆಂಬರ್ 19ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ನಗರದ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.
  • ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅಭ್ಯರ್ಥಿಗಳ ವಯಸ್ಸು 18ರಿಂದ 35 ವರ್ಷದೊಳಗಿರಬೇಕು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಅಥವಾ ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
  • ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು ಎಂದು ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.
  • ನೇರ ಉದ್ಯೋಗ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಮತ್ತು ಸಮಯಕ್ಕೆ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನ ನಡೆಯುವ ಸ್ಥಳಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿ ಅಗತ್ಯವಿರುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು. ಇಲ್ಲವೇ 9380663606 ಅಥವಾ 9108235132 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor