ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಅಪಘಾತ; ಎರಡು ಕಾರುಗಳ ನಡುವೆ ಡಿಕ್ಕಿ, ವ್ಯಕ್ತಿ ಸಾವು

ಹಂಚಿಕೊಳ್ಳಿ
WhatsApp Facebook X Telegram
malenadutoday image
Railway technical inspection Cyber crime Shivamogga District Court

ಸುದ್ದಿಯ ಸ್ಥಳ: Bengaluru, Karnataka

ಮಲೆನಾಡು ಟುಡೆ ಸುದ್ದಿ / ಬೀರೂರು / ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಗದಗಕ್ಕೆ ಪ್ರಯಾಣಿಸುತ್ತಿದ್ದ ಎರ್ಟಿಗಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀರೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ನೂತನ ರೈಲ್ವೆ ಮೇಲ್ಸೇತುವೆ ಸಮೀಪ ಮಂಗಳವಾರ ನಡೆದಿದೆ.

ತುರುವೇಕೆರೆ ಮೂಲದ ಗಜೇಂದ್ರ (37) ಮೃತಪಟ್ಟವರು. ಇವರು ಬೆಂಗಳೂರಿನ ಚಲನಚಿತ್ರ ಮಂಡಳಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅಪಘಾತದಲ್ಲಿ ಕಾರುಗಳಲ್ಲಿದ್ದ ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕಡೂರು ಹಾಗೂ ಶಿವಮೊಗ್ಗದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಗೃಹಪ್ರವೇಶ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಗಳನ್ನು ಹಂಚುವ ಉದ್ದೇಶದಿಂದ ಅವರು ಬೆಂಗಳೂರಿಗೆ ತೆರಳುತ್ತಿದ್ದರು. ಇದೇ ವೇಳೆ ಮೈಸೂರಿನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬೀರೂರು ಮಾರ್ಗವಾಗಿ ಗದಗಕ್ಕೆ ಹಿಂತಿರುಗುತ್ತಿದ್ದ ಎರ್ಟಿಗಾ ಕಾರಿನಲ್ಲಿ 8 ಮಂದಿ ಪ್ರಯಾಣಿಸುತ್ತಿದ್ದರು.

ಬೀರೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ನೂತನ ರೈಲ್ವೆ ಮೇಲ್ಸೇತುವೆಯ ತಿರುವಿನಲ್ಲಿ ಎರಡೂ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಕಾರುಗಳಲ್ಲಿದ್ದ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕಡೂರು ಮತ್ತು ಶಿವಮೊಗ್ಗದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor