ಶಿವಮೊಗ್ಗ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್; ಏನಿದು ಪ್ರಕರಣ ? 

ಹಂಚಿಕೊಳ್ಳಿ
WhatsApp Facebook X Telegram
Bhadravathi Rural Police Arrest Excise Act Accused
Bhadravathi Rural Police Arrest Excise Act Accused

ಸುದ್ದಿಯ ಸ್ಥಳ: Bhadravati, Shivamogga, Karnataka

 ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಕಳೆದ ಬರೋಬ್ಬರಿ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಬಕಾರಿ ಕಾಯ್ದೆ ಪ್ರಕರಣದ ಆರೋಪಿಯೊಬ್ಬನನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಿರೀಶ್ ನಾಯ್ಕ್ ಬಂಧಿತ ಆರೋಪಿಯಾಗಿದ್ದಾನೆ. 

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕರ್ನಾಟಕ ಅಬಕಾರಿ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ್ ನಾಯ್ಕ್ ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ದೀರ್ಘಕಾಲಿಕ ಬಾಕಿ ಪ್ರಕರಣ ಎಂದು ಘೋಷಿಸಿತ್ತು.

ಆರೋಪಿಯ ಪತ್ತೆಗಾಗಿ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಅದರಂತೆ, ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಗಳ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಗಿರೀಶ್ ನಾಯ್ಕ್‌ನನ್ನು ದಸ್ತಗಿರಿ ಮಾಡಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor