ಆಟವಾಡುತ್ತಲೇ ಮನೆಯ ಬಾಗಿಲು ಲಾಕ್ ಮಾಡಿಕೊಂಡ ಮಗು; ಕಿಟಕಿ ಕತ್ತರಿಸಿ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಹಂಚಿಕೊಳ್ಳಿ
WhatsApp Facebook X Telegram
Chikkamagaluru Firefighters Rescue 11-Month-Old Baby Trapped Inside Locked House
Chikkamagaluru Firefighters Rescue 11-Month-Old Baby Trapped Inside Locked House

ಸುದ್ದಿಯ ಸ್ಥಳ: Chikkamagaluru, Karnataka

ಮಲೆನಾಡು ಟುಡೆ ಸುದ್ದಿ / ಚಿಕ್ಕಮಗಳೂರು / ಮನೆಯೊಳಗೆ ಆಟವಾಡುತ್ತಿದ್ದ 11 ತಿಂಗಳ ಮಗು ಆಕಸ್ಮಿಕವಾಗಿ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮನೆಯೊಳಗೆ ಸಿಲುಕಿಕೊಂಡಿದ್ದ ಮಗುವನ್ನು ಅಗ್ನಿಶಾಮಕ ಸಿಬ್ಬಂದಿ 20 ನಿಮಿಷಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಮಗುವಿನ ತಾಯಿ ಮನೆ ಹೊರಗಡೆ ಕೆಲಸ ಮಾಡುತ್ತಿದ್ದರು. ಈ ವೇಳೆ 11 ತಿಂಗಳ ಮಗು ಮನೆಯೊಳಗೆ ಆಟವಾಡುತ್ತಿತ್ತು. ಆಟವಾಡುವಾಗ ಆಕಸ್ಮಿಕವಾಗಿ ಮನೆಯ ಬಾಗಿಲನ್ನು ಒಳಗಿನಿಂದಲೇ ಲಾಕ್ ಮಾಡಿಕೊಂಡಿದೆ. ಇದರಿಂದ ಹೊರಗಿದ್ದ ತಾಯಿಗೆ ಮನೆಯೊಳಗೆ ಪ್ರವೇಶಿಸಲು ಸಾಧ್ಯವಾಗದೆ ಆತಂಕಕ್ಕೆ ಒಳಗಾಗಿದ್ದಾರೆ.

ಮಗುವನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಮನೆಯ ಬಾಗಿಲು ಲಾಕ್ ಆಗಿದ್ದರಿಂದ ಪುಟ್ಟ ಮಗು ಒಳಗಡೆಯೇ ಸಿಲುಕಿಕೊಂಡಿತ್ತು. ಮಗುವನ್ನು ಹೊರಗೆ ಕರೆತರಲು ಸಾಧ್ಯವಾಗದ ಪರಿಸ್ಥಿತಿ ಎದುರಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮಗುವಿನ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಮನೆಯ ಬಾಗಿಲು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಹೈಡ್ರಾಲಿಕ್ ಕಟರ್ ಬಳಸಿ ಮನೆಯ ಕಿಟಕಿಯನ್ನು ಕತ್ತರಿಸಿದ್ದಾರೆ. ಸುಮಾರು 20 ನಿಮಿಷಗಳ ಕಾರ್ಯಾಚರಣೆಯ ಬಳಿಕ ಮನೆಯೊಳಗೆ ಸಿಲುಕಿದ್ದ 11 ತಿಂಗಳ ಮಗುವನ್ನು ರಕ್ಷಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor