ಇವತ್ತು ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ! 7 ಗಂಟೆಗಳ ಕಾಲ ಪವರ್ ಕಟ್

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವಿದ್ಯುತ್​​ ವ್ಯತ್ಯಯ
Shivamogga Power Cut ವಿದ್ಯುತ್​​ ವ್ಯತ್ಯಯ

ಸುದ್ದಿಯ ಸ್ಥಳ: Sagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ಸಾಗರ / ಸಾಗರ ನಗರದ ಬಿ.ಎಚ್. ರಸ್ತೆಯ ವಿಸ್ತರಣೆ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ಕೈಗೊಳ್ಳುತ್ತಿರುವುದರಿಂದ ಇಂದು (ನವೆಂಬರ್ 20) ಪಟ್ಟಣದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ರಸ್ತೆ ವಿಸ್ತರಣೆ ಕಾಮಗಾರಿಗೆ ಅಡ್ಡಿಯಾಗಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಉದ್ದೇಶದಿಂದ ನವೆಂಬರ್ 20ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಟ್ಟು 7 ಗಂಟೆಗಳ ಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾಗರ ನಗರದ ವರದ ಹೋಟೆಲ್ ಸುತ್ತಮುತ್ತಲಿನ ಪ್ರದೇಶಗಳು, ಬಿ.ಕೆ. ರಸ್ತೆ, ಗಾಂಧಿನಗರ ಹಾಗೂ ಐ.ಬಿ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೆಸ್ಕಾಂ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ 08183-226098 ಅಥವಾ 80742 2778 ಅನ್ನು ಸಂಪರ್ಕಿಸಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನ.21: ಈ ಪ್ರದೇಶಗಳಲ್ಲಿ ಪವರ್​ ಕಟ್

ಶಿವಮೊಗ್ಗ ನಗರ ಉಪವಿಭಾಗ-1, ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ನ. 21 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಬಾಪೂಜಿನಗರ, ಟ್ಯಾಂಕ್ ಮೊಹಲ್ಲಾ, ಬನಶಂಕರಿ ದೇವಸ್ಥಾನ ರಸ್ತೆ, ಚಚ್ ಕಾಂಪೌಂಡ್, ಟ್ಯಾಂಕ್ ಬಂಡ್ ರಸ್ತೆ, ಮೀನಾಕ್ಷಿಭವನ, ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor