ಶಿವಮೊಗ್ಗದ ಗರಿಷ್ಠ ಭದ್ರತೆಯ ಜೈಲು ಕಟ್ಟಡದ ಆವರಣದಲ್ಲಿದ್ದ ಸಿಸಿಟಿವಿ ಹಾರ್ಡ್ ಡಿಸ್ಕ್ ಕಳವು ?  

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಶಿವಮೊಗ್ಗ ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ ಶಿವಮೊಗ್ಗ ಜಿಲ್ಲೆಯ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಗರಿಷ್ಠ ಭದ್ರತಾ ಕಾರಾಗೃಹಕಾಮಗಾರಿ ಸ್ಥಳದ ಕಚೇರಿಯಲ್ಲಿದ್ದ ಕಂಪ್ಯೂಟರ್ ಮತ್ತು ಸಿಸಿಟಿವಿ ಮೇಲ್ವಿಚಾರಣಾ ವ್ಯವಸ್ಥೆಯ ಹಾರ್ಡ್ ಡಿಸ್ಕ್ ಕಳ್ಳತನವಾಗಿರುವ ಘಟನೆ ನಡೆದಿದ್ದು, ಈ ಕುರಿತು ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ಶಿವಮೊಗ್ಗ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರು ಸೋಗಾನೆಯ ಗರಿಷ್ಠ ಭದ್ರತಾ ಕಾರಾಗೃಹ ನಿರ್ಮಾಣ ಕಾಮಗಾರಿಯ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಮಗಾರಿಯ ಗುಣಮಟ್ಟ, ಭೌತಿಕ ಪ್ರಗತಿ ಹಾಗೂ ಸ್ಥಳದ ಚಟುವಟಿಕೆಗಳ ಮೇಲೆ ನಿಗಾ ಇಡಲು ನಿಗಮದ ವತಿಯಿಂದ ಕಾಮಗಾರಿ ಸ್ಥಳದ ಕಚೇರಿಯಲ್ಲಿ ಸಿಸಿಟಿವಿ ಮತ್ತು ಕಂಪ್ಯೂಟರ್ ಅಳವಡಿಸಲಾಗಿತ್ತು.   

ನಿರ್ಮಾಣ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಹಾಗೂ ಇತರೆ ಲೋಪದೋಷಗಳು ಕಂಡುಬಂದ ಕಾರಣದಿಂದ, ನಿಗಮವು ಗುತ್ತಿಗೆದಾರರೊಂದಿಗಿನ ಒಪ್ಪಂದವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸಿತ್ತು. ಇದರ ಭಾಗವಾಗಿ ನಿಗಮದ ಅಧಿಕಾರಿಗಳು ಕಾಮಗಾರಿ ಸ್ಥಳದಲ್ಲಿ ಜಂಟಿ ಪರಿಶೀಲನೆ ನಡೆಸಿದ್ದರು. 

ಜಂಟಿ ಪರಿಶೀಲನೆ ನಡೆದ ಎರಡು ದಿನಗಳ ಕಾಮಗಾರಿ ಸ್ಥಳದ ಕಚೇರಿಯಲ್ಲಿದ್ದ ಕಂಪ್ಯೂಟರ್ ಸ್ಥಗಿತಗೊಂಡಿರುವುದು ಬೆಳಕಿಗೆ ಬಂದಿದೆ. ಪರಿಶೀಲನೆ ನಡೆಸಿದಾಗ ಕಂಪ್ಯೂಟರ್ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿಡುತ್ತಿದ್ದ ಸುಮಾರು 25,000 ರೂ. ಮೌಲ್ಯದ 4 ಟಿಬಿ (4 TB) ಸಾಮರ್ಥ್ಯದ ಹಾರ್ಡ್ ಡಿಸ್ಕ್ ಕಳ್ಳತನವಾಗಿರುವುದು ಪತ್ತೆಯಾಗಿದೆ.   

ಕಾಮಗಾರಿಯ ಲೋಪದೋಷಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಮರೆಮಾಚುವ ಉದ್ದೇಶದಿಂದಲೇ ಗುತ್ತಿಗೆದಾರರ ಪ್ರತಿನಿಧಿ ಹಾಗೂ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಸೇರಿ ಈ ಹಾರ್ಡ್ ಡಿಸ್ಕ್ ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor