ಶಿವಮೊಗ್ಗ : ಬಾರ್​ನಲ್ಲಿ ಕೆಲಸ ಮಾಡುತ್ತಿದ್ದ ಭದ್ರಾವತಿ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮ*ಹತ್ಯೆ ? 

ಹಂಚಿಕೊಳ್ಳಿ
WhatsApp Facebook X Telegram
Bhadravathi Youth Dies by Suicide in Bengaluru
Bhadravathi Youth Dies by Suicide in Bengaluru

ಸುದ್ದಿಯ ಸ್ಥಳ: Bhadravati, Shivamogga, Karnataka · Bengaluru, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಬೆಂಗಳೂರಿನ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಭದ್ರಾವತಿ ಮೂಲದ 21 ವರ್ಷದ ಯುವಕ ದರ್ಶನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿವರವನ್ನು ಗಮನಿಸಿದರೆ, ಭದ್ರಾವತಿ ಮೂಲದ ಯುವಕನಾದ ದರ್ಶನ್ ಬೆಂಗಳೂರಿನ ಬಾರ್ ಒಂದರಲ್ಲಿ ದುಡಿಯುತ್ತಿದ್ದ. ಆದರೆ, ಮನೆಯವರ ಬಳಿ ತಾನು ಐಟಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದೇನೆ ಎಂದು ಹೇಳಿಕೊಂಡಿದ್ದ ಎನ್ನಲಾಗಿದೆ.

ಇತ್ತೀಚೆಗೆ ಕುಟುಂಬಸ್ಥರಿಗೆ 1 ಲಕ್ಷ ರೂಪಾಯಿ ಹಣ ಕಳುಹಿಸಿದ್ದ ಈ ಯುವಕ, ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆಗೆ ತನ್ನ ಕೊಠಡಿಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ . ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಮಾಗಡಿ ರೋಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor