ಸುದ್ದಿಯ ಸ್ಥಳ: Chikkamagaluru, Karnataka
ಮಲೆನಾಡು ಟುಡೆ ಸುದ್ದಿ / ಮೂಡಿಗೆರೆ / ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡುಕೋಣವೊಂದು ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಕೋಣದ ದಾಳಿಯಿಂದ ಗಾಯಗೊಂಡಿರುವ ಸತ್ಯ ಎಂಬ ಕಾರ್ಮಿಕರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.
ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯ ಮಾಕೋನಹಳ್ಳಿ ಗ್ರಾಮದ ಕಾಫಿತೋಟದಲ್ಲಿ ಸತ್ಯ ಕೆಲಸ ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದೆ. ಪರಿಣಾಮ ಅವರಿಗೆ ಜಾಸ್ತಿ ಪೆಟ್ಟು ಬಿದ್ದಿದೆ. ಕಾಡುಕೋಣದ ಕೋಡು ತಿವಿದು ಗಂಭೀರ ಗಾಯವಾಗಿದೆ. ಸ್ಥಳೀಯರುವ ಅವರನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ರು . ಈ ಮಧ್ಯೆ ಕಾಡುಕೋಣಗಳ ದಾಳಿ ಪ್ರಕರಣಗಳು ಪದೇಪದೇ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಫಿತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಜೀವಭಯ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತೋಟಗಳಲ್ಲಿ ದೈನಂದಿನ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ವನ್ಯಜೀವಿಗಳಿಂದ ಆಗುತ್ತಿರುವ ತೊಂದರೆ ಸೂಕ್ತ ರಕ್ಷಣೆ ಬೇಕಿದೆ ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.
