ಶಿವಮೊಗ್ಗದ ಹಳೆಯ ತುಂಗಾ ಸೇತುವೆ ತೆರವು ಕಾರ್ಯಾಚರಣೆ ಆರಂಭ!

ಹಂಚಿಕೊಳ್ಳಿ
WhatsApp Facebook X Telegram
Shivamogga Old Tunga Bridge Replacement Preparations Begin
Shivamogga Old Tunga Bridge Replacement Preparations Begin

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಹಳೆಯ ಸೇತುವೆಯನ್ನು ತೆರವುಗೊಳಿಸಿ, ಅದೇ ಸ್ಥಳದಲ್ಲಿ ಹೊಸ ಸೇತುವೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿದಂತೆ ಪ್ರಾಥಮಿಕ ಸಿದ್ಧತೆಗಳು ಆರಂಭವಾಗಿದ್ದು, ಇಂದಿನಿಂದ ತೆರವು ಕಾರ್ಯಾಚರಣೆ ಸಹ ಆರಂಭವಾಗಲದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಹಳೆಯ ಸೇತುವೆಯ ಮೇಲಿರುವ ವಿದ್ಯುತ್ ಕೇಬಲ್‌ಗಳನ್ನು ಸ್ಥಳಾಂತರಿಸಲಾಗಿದ್ದು, ಇವತ್ತಿನಿಂದ ಈ ನಿಟ್ಟಿನಲ್ಲಿ ಇನ್ನಷ್ಟು ಕಾಮಗಾರಿಗಳು ನಡೆಯಲಿವೆ ಎನ್ನಲಾಗಿದೆ.

ಹೊಸ ತುಂಗಾ ಸೇತುವೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆದರೆ ಕಾಮಗಾರಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಈ ನಡುವೆಯೇ ಸೇತುವೆ ನಿರ್ಮಾಣಕ್ಕೆ ಅಡ್ಡಿಯಾಗಬಹುದಾದ ವಿದ್ಯುತ್ ಮಾರ್ಗಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಸ್ಥಳಾಂತರಿಸಲು ಲೋಕೋಪಯೋಗಿ ಇಲಾಖೆ ಕ್ರಮ ಕೈಗೊಂಡಿದೆ. ಹಳೆಯ ಸೇತುವೆಯ ಮೇಲಿರುವ ವಿದ್ಯುತ್ ಮಾರ್ಗಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಲೋಕೋಪಯೋಗಿ ಇಲಾಖೆ ಮೆಸ್ಕಾಂಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಕೇಬಲ್‌ಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ

ಸೇತುವೆಯ ಮೇಲಿರುವ 11 ಕೆ.ವಿ. ಸಾಮರ್ಥ್ಯದ 4 ವಿದ್ಯುತ್ ಕೇಬಲ್‌ಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಗಿದೆ. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ ಅಡ್ಡಿಯಾಗದಂತೆ ಸ್ಥಳಾಂತರಿಸಲಾಗುತ್ತಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor