ಶಿವಮೊಗ್ಗ : ಸಂಬಂಧಿಕರ ಮದುವೆಗೆ ತೆರಳಿದ್ದಾಗ ಉಡುಪಿಯಲ್ಲಿ ಅಪಘಾತ, ಶಿವಮೊಗ್ಗ ಮೂಲದ ವ್ಯಕ್ತಿ ಸಾವು

ಹಂಚಿಕೊಳ್ಳಿ
WhatsApp Facebook X Telegram
Hosanagara Youth Dies in Udupi Road Accident
Hosanagara Youth Dies in Udupi Road Accident

ಸುದ್ದಿಯ ಸ್ಥಳ: Hosanagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ :  ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮದುವೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಶಿವಮೊಗ್ಗ ಮೂಲದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮದ ಕಡಸೂರು ನಿವಾಸಿ ಹರ್ಷ (29) ಅಪಘಾತದಲ್ಲಿ ಮೃತ ಪಟ್ಟಿರುವ ದುರ್ದೈವಿ 

ಹರ್ಷ ಸಂಬಂಧಿಕರ ಮದುವೆ ಸಮಾರಂಭವನ್ನು ಮುಗಿಸಿಕೊಂಡು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಉಡುಪಿ ಜಿಲ್ಲೆಯ ಕೋಟೇಶ್ವರ ಸಮೀಪ ಎದುರಿನಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ.​ಅಪಘಾತದ ತೀವ್ರತೆಗೆ, ಬೈಕ್ ಸವಾರ ಹರ್ಷ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ಹಿನ್ನೆಲೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor