ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಪರಿಷ್ಕೃತ ವೇತನ ಜಾರಿ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ನಾಳೆ (ನವೆಂಬರ್ 25, ಬುಧವಾರ) ಬೆಳಿಗ್ಗೆ 10:30 ಗಂಟೆಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಗುತ್ತಿಗೆ ಸ್ವಚ್ಛತಾ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳ ಸಂಘ (ರಿ) ನೇತೃತ್ವದಲ್ಲಿ ಈ ಹಕ್ಕೊತ್ತಾಯ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಸರ್ಕಾರವು ದಿನಾಂಕ 22-05-2026 ರಂದು ಹೊರಡಿಸಿರುವ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ಅಲ್ಲದೆ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಸರಿಯಾದ ವೇತನ, ಸಾಮಾಜಿಕ ಭದ್ರತೆ, ನಿಯಮಿತವಾಗಿ ಪಿಎಫ್, ವೇತನ ಚೀಟಿ ಹಾಗೂ ಸರ್ಕಾರಿ ಕಲ್ಯಾಣ ಸೌಲಭ್ಯಗಳನ್ನು ಒದಗಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.
ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕಾನೂನು ನಿಯಮಗಳನ್ನು ಪಾಲಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಗೌರವಾಧ್ಯಕ್ಷರಾದ ಭಾನುಪ್ರಸಾದ್ ಬಿ.ಎ. ಹಾಗೂ ಅಧ್ಯಕ್ಷರು ತಿಳಿಸಿದ್ದಾರೆ.
