ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ವಿನಯ್ ತಾಂದಲೆ ನೇಮಕ

ಹಂಚಿಕೊಳ್ಳಿ
WhatsApp Facebook X Telegram
Vinay Tandale Appointed President of Guarantee Scheme
Vinay Tandale Appointed President of Guarantee Scheme

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವಿನಯ್ ತಾಂದಲೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದನ್ವಯ, ಪ್ರಜಾಸೇವಾ ಇಲಾಖೆ (ತಪಾಸಣೆ) ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಈ ನೇಮಕಾತಿ ಆದೇಶವನ್ನು ಜಾರಿಗೊಳಿಸಿದ್ದಾರೆ. ಇಂದು ವಿನಯ್ ತಾಂದಲೆ ಅವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (EO) ಅವರಿಂದ ನೇಮಕಾತಿ ಪತ್ರವನ್ನು ಅಧಿಕೃತವಾಗಿ ಸ್ವೀಕರಿಸಿದರು.

ನೂತನ ಜವಾಬ್ದಾರಿ ವಹಿಸಿಕೊಂಡಿರುವ ವಿನಯ್ ತಾಂದಲೆ ಅವರಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್, ಎಸ್. ಮರಿಯಪ್ಪ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಯೋಗಿಶ್ ಅವರು ಶುಭ ಹಾರೈಸಿದ್ದಾರೆ .

ಇವರೊಂದಿಗೆ ಕಾಂಗ್ರೆಸ್ ಯುವ ಮುಖಂಡ ಶರತ್ ಮರಿಯಪ್ಪ, ಕೋಟೆ ಸೀತಾರಾಮಾಂಜನೇಯ ದೇವಾಲಯ ನಿರ್ವಹಣಾ ಸಮಿತಿ ಅಧ್ಯಕ್ಷ ದೇವೇಂದ್ರಪ್ಪ, ಗ್ಯಾರಂಟಿ ಯೋಜನಾ ಸದಸ್ಯ ಬಸವರಾಜ್, ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ಅಧ್ಯಕ್ಷ ಗಜೇಂದ್ರನಾಥ್ ಮಾಳೋದೆ, ಭಾವಸಾರ ಸೊಸೈಟಿ ಅಧ್ಯಕ್ಷ ಸಂತೋಷ್ ಸಾಕ್ರೆ ಸೇರಿದಂತೆ ಅಪಾರ ಹಿತೈಷಿಗಳು ಮತ್ತು ಸ್ನೇಹಿತರು ಅಭಿನಂದನೆಸಲ್ಲಿಸಿದ್ದಾರೆ. 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor